ಶಿರಸಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಶಿಕ್ಷೆ

USHA HEGDE
Published on

ಶಿರಸಿ: ಅಂಗನವಾಡಿ ಶಿಕ್ಷಕಿ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯೆಯಾಗಿ ಏಕಕಾಲದಲ್ಲಿ ಕೆಲಸ ಮಾಡಿದ್ದ ಕುರಿತು ದಾಖಲಾಗಿದ್ದ ಭ್ರಷ್ಟಾಚಾರ ಪ್ರಕರಣದಲ್ಲಿ ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಉಷಾ ಹೆಗಡೆ ಅವರಿಗೆ ಜಿಲ್ಲಾ ಲೋಕಾಯುಕ್ತ ನ್ಯಾಯಾಲಯ ಒಂದು ವರ್ಷ ಸಜೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

2011ರ ಜನವರಿಯಿಂದ 2012ರ ನವೆಂಬರ್​ವರೆಗೆ ಅವರು ಜಿ.ಪಂ. ಸದಸ್ಯತ್ವದ ಜತೆಗೆ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ನಿರ್ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆಯಾಗಿ ಈ ಅವಧಿಯಲ್ಲಿ 88,630 ರೂ. ಗೌರವಧನ ಪಡೆದಿದ್ದರು. ಬದನಗೋಡ ವ್ಯಾಪ್ತಿಯ ಜಿಪಂ ಜನಪ್ರತಿನಿಧಿಯಾಗಿಯೂ ಅಂಗನವಾಡಿ ಕಾರ್ಯಕರ್ತೆಯಾಗಿರುವುದಕ್ಕೆ ಸಂಬಂಧಿಸಿ ಇಬ್ರಾಹಿಂ ನಬಿ ಸಾಬ್ ಎಂಬುವವರು ದೂರು ನೀಡಿದ್ದರು.

ಅಂಗನವಾಡಿ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗದೇ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಹಾಜರಾತಿ ಪಟ್ಟಿಯಲ್ಲಿ ಸುಳ್ಳು ಸಹಿ ಮಾಡಿದ್ದಾರೆ ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಲಾಗಿತ್ತು. ವಾದ ಪ್ರತಿವಾದ ಆಲಿಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯಕುಮಾರ ಸೋಮವಾರ ತೀರ್ಪು ನೀಡಿದ್ದಾರೆ. ಲೋಕಾಯುಕ್ತ ಪರ ಕಾರವಾರದ ಅಭಿಯೋಜಕ ಎಲ್.ಎಂ. ಪ್ರಭು ವಾದಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net