

ಕಾರವಾರ: ಶಿರೂರು ಗುಡ್ಡ ಕುಸಿತ ಘಟನೆ ಯಲ್ಲಿ ಕಣ್ಮರೆಯಾಗಿರುವ ಜಗನ್ನಾಥ ನಾಯ್ಕ್, ಅವರ ಮಗಳು ಪಲ್ಲವಿ ನಾಯ್ಕ್ ಅವರಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗ ದೊರೆಯುವುದು ಖಚಿತವಾಗಿದೆ.
ಹೊನ್ನಾವರ ದಲ್ಲಿ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಉದ್ಯೋಗ ನೀಡುವ ಸಂಬಂಧ ಆದೇಶ ಪತ್ರವನ್ನು ವಿತರಿಸಿದರು. ಪ್ರವಾಸೋದ್ಯಮ ಇಲಾಖೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯ ಹಾಗೂ ವಿವಿಧ ಅಧಿಕಾರಿಗಳು ಇದ್ದರು.
ನಾಪತ್ತೆಯಾಗಿರುವ ಜಗನ್ನಾಥ ನಾಯ್ಕ ಅವರಿಗೆ ಮೂವರು ಹೆಣ್ಣು ಮಕ್ಕಳು. ಕುಟುಂಬಕ್ಕೆ ಜೀವನಾಧಾರವಾಗಿದ್ದ ತಂದೆ ಮೃತಪಟ್ಟಿದ್ದರಿಂದ ಹೆಣ್ಣು ಮಕ್ಕಳ ಬದುಕು ಕಷ್ಟವಾಗಿತ್ತು. ಕುಮಟಾ ಎಸಿ ಅವರು ದುರ್ಘಟನೆ ನಡೆದ ಕೆಲವೇ ದಿನದಲ್ಲಿ ಜಗನ್ನಾಥ ನಾಯ್ಕರ ಕುಟುಂಬಸ್ಥರನ್ನು ಭೇಟಿಯಾಗಿ ಕುಮಟಾ ಎಸಿ ಕಚೇರಿಯಲ್ಲಿ ಉದ್ಯೋಗ ನೀಡುವ ಭರವಸೆ ನೀಡಿದ್ದರು.
ಆದರೆ ಘಟನೆ ನಡೆದು ತಿಂಗಳಾದರೂ ಎಸಿ ಕಚೇರಿಯಿಂದ ಮಾಹಿತಿ ಪಡೆದರು ಉದ್ಯೋಗ ಕೊಟ್ಟಿಲ್ಲ ಎಂದು ಜಗನ್ನಾಥ ನಾಯ್ಕ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದರು. ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ್ದರು.