ಅರ್ಜುನ್ ಪತ್ತೆ ವಿಚಾರ ಜು.24 ರಂದು ಹೈಕೋರ್ಟ್ ನಲ್ಲಿ ವಿಚಾರಣೆ

Arjun
Published on

ಕಾರವಾರ: ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ನಾಪತ್ತೆಯಾದ ಕೇರಳ ಕಲ್ಲಿಕೋಟೆ ಮೂಲದ ಲಾರಿ ಚಾಲಕ ಅರ್ಜುನ್ ರನ್ನು ಶೀಘ್ರ ಪತ್ತೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಬೇಕು ಎಂದು ಒತ್ತಾಯಿಸಿ ರಾಜ್ಯ ಹೈಕೋರ್ಟ್‌‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ದಾಖಲಾಗಿದೆ.

ವಕೀಲರಾದ ಸಿ.ಜಿ.ಮಲೆಯಾಳಿ ಹಾಗೂ ಕೆ.ಆರ್.ಸುಭಾಷ್ ಚಂದ್ರನ್ ಅವರು ಅರ್ಜಿ ದಾಖಲಿಸಿದ್ದು, ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳು ಘಟನೆಯ ಪ್ರಸ್ತುತ ಸನ್ನಿವೇಶದ ಬಗ್ಗೆ ವರದಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ್ದಾರೆ. ಜು.24 ರಂದು ವಿಚಾರಣೆ ಮುಂದೂಡಿದ್ದಾರೆ.

ಸೋಮವಾರ ಸುಭಾಷ್ ಚಂದ್ರನ್ ಸುಪ್ರೀಂ‌ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು‌. ವಿಚಾರಣೆ ನಡೆಸಿದ ದ್ವಿ ಸದಸ್ಯ ಪೀಠವು ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net