ಅರಕಲಗೂಡು: ತಾಲೂಕಿನ ಮರವಳಲು ಗ್ರಾಮದ ಐತಿಹಾಸಿಕ ಶ್ರೀ ವಿರುಪಾಕ್ಷೇಶ್ವರಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ಶನಿವಾರ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಕುಂಭಾಭಿಷೇಕ, ವಿಶೇಷ ಪೂಜಾ ಕೈಂಕರ್ಯಗಳು ವಿಧಿವತ್ತಾಗಿ ನಡೆದವು. ಎರಡೂ ದಿನ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.