

ವಿಜಯವಾಣಿ ಸುದ್ದಿಜಾಲ ಬೈಲಹೊಂಗಲ
ಸಮಾಜದಲ್ಲಿ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಆಸರೆಯಾಗಿದೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಪಟ್ಟಣದ ಶಿವಬಸವ ಕಲ್ಯಾಣ ಮಂಟದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆ ಬಿ.ಸಿ ಟ್ರಸ್ಟ್ ತಾಲೂಕು ಘಟಕ, ಬ್ಯಾಂಕ್ ಆ್ ಮಹಾರಾಷ್ಟ್ರ, ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರೀ ಶಿವ ಸಹಸ್ರ ಬಿಲ್ವನಾಮಾರ್ಚನೆ ಪೂಜೆ ಹಾಗೂ ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದರು.
ಸ್ವಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ, ವೃತ್ತಿ ತರಬೇತಿ ನೀಡುವ ಮೂಲಕ ಮಹಿಳೆಯರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಧರ್ಮಸ್ಥಳ ಸಂಸ್ಥೆ ನಿರಂತರವಾಗಿ ಶ್ರಮಿಸುತ್ತಿದೆ. ಕ್ಷೇತ್ರದಾದ್ಯಂತ ಮದ್ಯವರ್ಜನ ಶಿಬಿರ ನಡೆಸುವ ಮೂಲಕ ವ್ಯಸನಿಗಳ ಬದುಕು ಬದಲಿಸಿದೆ. ಗ್ರಾಮೀಣ ಭಾಗದಲ್ಲಿ ಮಠ-ಮಂದಿರಗಳ ಜೀಣೋದ್ಧಾರ ಹಾಗೂ ರುದ್ರಭೂಮಿ ಅಭಿವೃದ್ಧಿಗೆ ಧನಸಹಾಯ ನೀಡುವುದು ಸೇರಿ ವಿವಿಧ ಸಮಾಜಮುಖಿ ಕಾರ್ಯಗಳ ಸಂಸ್ಥೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖಂಡ ಬಸವರಾಜ ಸೊಪ್ಪಿಮಠ ಮಾತನಾಡಿದರು. ಧರ್ಮಸ್ಥಳ ಸಂಸ್ಥೆ ಜಿಲ್ಲಾ ನಿರ್ದೇಶಕ ಸತೀಶ ನಾಯ್ಕ, ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ಪತ್ರಕರ್ತರಾದ ಈಶ್ವರ ಹೋಟಿ, ಮಹಾಂತೇಶ ತುರಮರಿ, ಕಲಾವಿದ ಸಿ. ಕೆ.ಮೆಕ್ಕೆದ ಮಾತನಾಡಿದರು. ಚಂದ್ರಿಕಾ ಕಳಂಕರ, ಅಂಬಿಕಾ ಕೊಟಬಾಗಿ, ರತ್ನಾ ಗೋಧಿ ಇತರರಿದ್ದರು. ತಾಲೂಕು ಯೋಜನಾಧಿಕಾರಿ ವಿಜಯಕುಮಾರ ಸ್ವಾಗತಿಸಿದರು. ಶೈಲಾ ಜಕ್ಕಣ್ಣವರ ನಿರೂಪಿಸಿದರು. ರವಿಕುಮಾರ ವಂದಿಸಿದರು.