ಶಿವ ನಾಯ್ಕ್ ಸಾಲಿಗ್ರಾಮ ಪ.ಪಂ ಮುಖ್ಯಾಧಿಕಾರಿಯಾಗಿ ನೇಮಕ

saligrama
Published on

ಕೋಟ: ಸಾಲಿಗ್ರಾಮ ಪಟ್ಟಣಪಂಚಾಯಿತಿ ನೂತನ ಮುಖ್ಯಾಧಿಕಾರಿಯಾಗಿ ಶಿವ ನಾಯ್ಕ್ ಅವರನ್ನು ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ. ಗುರುವಾರ ಅಧಿಕಾರ ಸ್ವೀಕರಿಸಿದ್ದು, ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಪ್ರಸ್ತುತ ಶೃಂಗೇರಿ ಪಟ್ಟಣಪಂಚಾಯಿತಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪೌರಾಡಳಿತ ಇಲಾಖೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net