ಬಂಟ್ವಾಳ: ಸಜೀಪಮೂಡ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಸಜೀಪಮೂಡ ಸರ್ಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ಸದಸ್ಯರಾಗಿದ್ದ ಸೀತಾರಾಮ ಅಗೋಳಿಬೆಟ್ಟು ಅವರು ಇತ್ತೀಚೆಗೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ,ಅವರ ಆರೋಗ್ಯ ಸುಧಾರಿಸಲಿ ಎಂಬ ಸಂಕಲ್ಪದೊಂದಿಗೆ ಸಾಮೂಹಿಕ ಶಿವ ಪಂಚಾಕ್ಷರಿ ಜಪ ಹಾಗೂ ಶ್ರೀ ಮೃತ್ಯುಂಜಯ ಶಾಂತಿ ಹೋಮ ಸಜೀಪಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಮಂಗಳವಾರ ಸಜೀಪಮೂಡ ಗ್ರಾಮದ ಮಿತ್ತಮಜಲು ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆಯಿತು.
ಸಜೀಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಎಸ್.ಶ್ರೀಕಾಂತ್ ಶೆಟ್ಟಿ ಪ್ರಮುಖರಾದ ವಸಂತ ಶೆಟ್ಟಿ ಕೆ.ಗಿರೀಶ್ ಕುಮಾರ್.ಕೆ ಸೀತಾರಾಮ ಶೆಟ್ಟಿ, ಜಗದೀಶ ಐತಾಳ, ಸಂತೋಷ್ ಕುಲಾಲ್, ಲಕ್ಷ್ಮಣ ಸಪಲ್ಯ ಪಂಚಾಯಿತಿ ಅಧ್ಯಕ್ಷ ಶೋಭಾ ಶೆಟ್ಟಿ, ಪ್ರೌಢಶಾಲಾ ವಿಭಾಗದ ಎಸ್‌ಡಿಎಂಸಿ ಅಧ್ಯಕ್ಷ ಜಯಪ್ರಕಾಶ್ ಪೆರ್ವ ಮೊದಲಾದವರು ಉಪಸ್ಥಿತರಿದ್ದರು.