ಶಿವದಾಸಿಮಯ್ಯ ಜಯಂತಿ ಜೂ. 1ರಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾ ಲಿಂಗಾಯತ ಶಿವಶಿಂಪಿ ಸಂಘದ ವತಿಯಿಂದ ಕುಲಗುರು ಶ್ರೀ ಶಿವದಾಸಿಮಯ್ಯನವರ ಜಯಂತಿ, ಹಿರಿಯ ನಾಗರಿಕರಿಗೆ ಸನ್ಮಾನ, ಸಾಧಕರಿಗೆ ಸನ್ಮಾನ, ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಜಿಲ್ಲೆ ಶಿವಸಿಂಪಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕುಂಭ ಮೆರವಣಿಗೆ ಸಮಾರಂಭವನ್ನು ಜೂ. 1ರಂದು ಇಲ್ಲಿನ ಅಕ್ಕನ ಬಳಗದಲ್ಲಿ ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ 8 ಗಂಟೆಗೆ ಇಲ್ಲಿನ ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನದಿಂದ ಕುಂಭ ಮೆರವಣಿಗೆ, 10 ಗಂಟೆಗೆ ಅಕ್ಕನ ಬಳಗದಲ್ಲಿ ಶ್ರೀ ಶಿವದಾಸಿಮಯ್ಯನವರ ಜಯಂತಿ, ಸನ್ಮಾನ ಹಾಗೂ ಸಮಾಜ ಬಾಂಧವರಿಗೆ ಆರೋಗ್ಯ ತಪಾಸಣೆ ಉಚಿತ ಶಿಬಿರ ಏರ್ಪಡಿಸಲಾಗಿದೆ. ಮೇ 28ರೊಳಗೆ ಅಂಕಪಟ್ಟಿ, ಭಾವಚಿತ್ರದೊಂದಿಗೆ ಸಂಘದ ಕಚೇರಿಯಲ್ಲಿ ಹೆಸರು ನೊಂದಾಯಿಸಬೇಕು ಎಂದು ಜಿಲ್ಲಾಧ್ಯಕ್ಷ ಪಂಚಲಿಂಗಪ್ಪ ಖೋದಾನಪುರ ಹಾಗೂ ಜಿಲ್ಲಾ ಕಾರ್ಯದರ್ಶಿ ಶಂಕರ ಸಣಕಲ್​ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net