ಶಿವಾಜಿ ಭಾರತದ ಸ್ವಾಭಿಮಾನದ ಶಕ್ತಿ

19-02-Shiva-2
ರಾಯಚೂರಿನ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಸೋಮವಾರ ಏರ್ಪಡಿಸಿದ್ದ ಛತ್ರಪತಿ ಶಿವಾಜಿ ಜಯಂತಿಯನ್ನು ಅಪರ ಜಿಲ್ಲಾಕಾರಿ ಅಶೋಕ ದುಡಗುಂಟಿ ಉದ್ಘಾಟಿಸಿದರು. ಸಹಾಯಕ ಆಯುಕ್ತ ಎಸ್.ಎಸ್.ಸಂಪಗಾವಿ, ತಹಸೀಲ್ದಾರ್ ಸುರೇಶ ವರ್ಮಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಗಳಾ ನಾಯಕ, ಸಮಾಜದ ಮುಖಂಡರಾದ ಹನುಮಂತಪ್ಪ, ಭೀಮರಾವ್ ಇದ್ದರು.
Published on

ರಾಯಚೂರು: ಛತ್ರಪತಿ ಶಿವಾಜಿ ಭಾರತದ ಸ್ವಾಭಿಮಾನದ ಶಕ್ತಿಯಾಗಿದ್ದು, ತಮ್ಮ ಧೈರ್ಯ, ಶೌರ್ಯದ ಮೂಲಕ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರು ಎಂದು ದೇವದುರ್ಗದ ಸಾಹಿತಿ ಶಂಕರರಾವ್ ಉಬಾಳೆ ಹೇಳಿದರು.
ಸ್ಥಳೀಯ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಸೋಮವಾರ ಏರ್ಪಡಿಸಿದ್ದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ, ಶಿವಾಜಿ ಮಹಾರಾಜರಲ್ಲಿದ್ದ ಧೈರ್ಯ, ಛಲವನ್ನು ಇಂದಿನ ಯುವಜನಾಂಗ ಮೈಗೂಡಿಸಿಕೊಳ್ಳಬೇಕು ಎಂದರು.
ಸ್ವಾಭಿಮಾನಿ ರಾಷ್ಟ್ರ ನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಹಿಂದೂಸ್ಥಾನವನ್ನು ಒಗ್ಗೂಡಿಸಲು ಶ್ರಮಿಸಿದ್ದರು. ಸಣ್ಣ ವಯಸ್ಸಿನಲ್ಲಿಯೇ ಯುದ್ಧ ಕಲೆಯನ್ನು ಕಲಿತು ಹಲವಾರು ಯುದ್ಧಗಳಲ್ಲಿ ತಮ್ಮ ವಿನೂತನ ಯುದ್ಧ ಶೈಲಿಯಿಂದ ಗೆಲುವು ಸಾಸಿದ್ದರು ಎಂದು ತಿಳಿಸಿದರು.
ಅಪರ ಜಿಲ್ಲಾಕಾರಿ ಅಶೋಕ ದುಡಗುಂಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದಕ್ಕೂ ಮೊದಲು ಖಾಸಬಾವಿಯಿಂದ ರಂಗಮಂದಿರದವರೆಗೆ ಮಂಗಳವಾದ್ಯಗಳೊಂದಿಗೆ ಛತ್ರಪತಿ ಶಿವಾಜಿ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತ ಎಸ್.ಎಸ್.ಸಂಪಗಾವಿ, ತಹಸೀಲ್ದಾರ್ ಸುರೇಶ ವರ್ಮಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಗಳಾ ನಾಯಕ, ಸಮಾಜದ ಮುಖಂಡರಾದ ಹನುಮಂತಪ್ಪ, ಭೀಮರಾವ್, ರಾಜೇಂದ್ರಕುಮಾರ ಶಿವಾಳೆ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net