

ಬೆಂಗಳೂರು: ಶಿವಾಜಿನಗರ ಶಾಸಕ, ಕಾಂಗ್ರೆಸ್ ಮುಖಂಡ ರಿಜ್ವಾನ್ ಅರ್ಷದ್ ಅವರಿಗೆ ಕರೊನಾವೈರಸ್ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ನಿನ್ನೆ ಕರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಮನೆಯಲ್ಲೇ ಸೆಲ್ಪ್ ಕ್ವಾರಂಟೈನ್ಗೆ ಒಳಗಾಗಿದ್ದೇನೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿರುವ ಅವರು, ಕರೊನಾ ಬಗ್ಗೆ ಭಯ ಬೇಡ. ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಿ ಎಂದು ಕೋರಿದ್ದಾರೆ.
2019 ರ ಡಿಸೆಂಬರ್ನಲ್ಲಿ ನಡೆದಿದ್ದ ಉಪ ಚುನಾವಣೆಯಲ್ಲಿ ಶಿವಾಜಿನಗರ ವಿಧಾನಸಭೆಯಿಂದ ರಿಜ್ವಾನ್ ಅರ್ಷದ್ ಅವರು ಸ್ಪರ್ಧಿಸಿ ಗೆದ್ದಿದ್ದರು.