

ಬೆಂಗಳೂರು: ವಚನಜ್ಯೋತಿ ಬಳಗದ ಸಂಸ್ಥಾಪಕ ಪಂಡಿತ ಕೆ.ಪಿ. ಶಿವಲಿಂಗಯ್ಯ ಸ್ಮರಣಾರ್ಥ ಸ್ಥಾಪಿಸಿರುವ ‘ಶಿವಲಿಂಗ ಪ್ರಶಸ್ತಿ - 2024’ಗೆ ಗಾಯಕ ರವೀಂದ್ರ ಸೊರಗಾವಿ ಅವರನ್ನು ಆಯ್ಕೆ ಮಾಡಲಾಗಿದೆ.
ವಚನಗಳನ್ನು ತಮ್ಮ ಸಿರಿಕಂಠದಲ್ಲಿ ನಾಡಿನ ಜನರಿಗೆ ತಲುಪಿಸುತ್ತಿರುವ ಸೊರಗಾವಿಯವರ ವಚನ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 10 ಸಾವಿರ ರೂ. ನಗದು ಲಕ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಸೋಮವಾರ (ಫೆ.26) ಸಂಜೆ 5 ಗಂಟೆಗೆ ನಗರದ ಸಂಸ ಬಯಲು ರಂಗಮಂದಿರದಲ್ಲಿ ನಡೆಯಲಿದ್ದು, ಕವಿ ಪ್ರೊ. ಎಚ್.ಎಸ್. ಶಿವಪ್ರಕಾಶ್ ಉದ್ಘಾಟಿಸಲಿದ್ದಾರೆ. ಕನ್ನಡ-ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಮಾಜಿ ಸಚಿವರೂ ಆದ ಶಾಸಕ ಎಂ. ಕೃಷ್ಣಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಜಯವಿಭವಸ್ವಾಮಿ ಸೇರಿ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಬಳಗದ ಅಧ್ಯಕ್ಷ ಎಸ್. ಪಿನಾಕಪಾಣಿ ತಿಳಿಸಿದ್ದಾರೆ.