

ರಾಮನಗರ: ಕಳೆದ ಲೋಕಸಭೆ ಚುಣಾವಣೆ ಸಮಯದಿಂದ ಕಾಲಿ ಉಳಿದಿದ್ದ ರಾಮನಗರ ತಾಲೂಕು ಜೆಡಿಎಸ್ ಘಟಕಕ್ಕೆ ನೂತನ ಸಾರಥಿಯನ್ನು ಆಯ್ಕೆ ಮಾಡಲಾಗಿದೆ.
ಸಬ್ಬಕೆರೆ ಶಿವಲಿಂಗಪ್ಪ ಅವರನ್ನು ರಾಮನಗರ ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದು, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶನಿವಾರ ನೇಮಕಾತಿ ಪತ್ರವನ್ನು ನೀಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಪಕ್ಷದ ಮುಖಂಡರ ಸಮ್ಮುಖದಲ್ಲಿ ನಿಖಿಲ್, ಶಿವಲಿಂಗಪ್ಪ ಅವರಿಗೆ ನೇಮಕಾತಿ ಪತ್ರವನ್ನು ನೀಡಿದ್ದಾರೆ.