

ನಾಗಮಂಗಲ: ತಾಲೂಕಿನ ಬ್ರಹ್ಮದೇವರಹಳ್ಳಿ ಗ್ರಾ.ಪಂ ಅಧ್ಯಕ್ಷೆಯಾಗಿ ಶಿವಮ್ಮ ಮತ್ತು ಉಪಾಧ್ಯಕ್ಷರಾಗಿ ಇ.ಎನ್.ಉಮೇಶ್ ಅವಿರೋಧವಾಗಿ ಆಯ್ಕೆಯಾದರು.
15ಮಂದಿ ಸದಸ್ಯ ಬಲವನ್ನು ಹೊಂದಿರುವ ಬ್ರಹ್ಮದೇವರಹಳ್ಳಿ ಗ್ರಾ.ಪಂ.ಗೆ ಈ ಹಿಂದೆ ಅಧ್ಯಕ್ಷರಾಗಿದ್ದ ಬಿ.ಸಿ.ವೆಂಕಟೇಶ್ ಮತ್ತು ಉಪಾಧ್ಯಕ್ಷರಾಗಿದ್ದ ಸವಿತಾ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಸಾಮಕಹಳ್ಳಿ ಗ್ರಾಮದ ಶಿವಮ್ಮ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಜ್ಜಲಘಟ್ಟ ಗ್ರಾಮದ ಇ.ಎನ್.ಉಮೇಶ್
ಹೊರತುಪಡಿಸಿ ಮತ್ಯಾರು ನಾಮಪತ್ರ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿ ತಾ.ಪಂ. ಇಒ ಚಂದ್ರಮೌಳಿ ಅವಿರೋಧ ಆಯ್ಕೆ ಪ್ರಕಟಿಸಿದರು.
ಅವಿರೋಧ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಗ್ರಾ.ಪಂ. ಮುಂಭಾಗದ ಚಾಮರಾಜನಗರ-ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಟಾಕಿ ಸಿಡಿಸಿ, ಸಚಿವ ಎನ್.ಚಲುವರಾಯಸ್ವಾಮಿ ಪರ ಜಯಘೋಷ ಕೂಗಿ, ಸಿಹಿ ಹಂಚಿ ಸಂಭ್ರಮಿಸಿದರು.
ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಎಸ್.ಸಿ.ಚೇತನ್‌ಕುಮಾರ್, ಗ್ರಾಪಂ ಸದಸ್ಯರಾದ ಕೊಣನೂರು ರವಿ, ಸವಿತಾ, ತಾರಾ, ಪುಟ್ಟರಾಜು, ವೆಂಕಟೇಶ್, ಜಯಮ್ಮ, ಲಕ್ಷ್ಮಮ್ಮ, ಪಾರ್ವತಿ, ಮಹದೇವಮ್ಮ, ಕಾಂಗ್ರೆಸ್ ಮುಖಂಡರಾದ ಉಮೇಶ್, ಹರೀಶ್, ಚಂದ್ರು, ಮರೀಗೌಡ, ರಾಜಣ್ಣ, ಕುಮಾರ್, ಬೊಮ್ಮೇಗೌಡ ಇತರರು ಇದ್ದರು.