ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡದಿರಿ

21bdvt1
ಭದ್ರಾವತಿಯ ಹೊಸಸಿದ್ದಾಪುರದಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ಡೆಂೆ ಜಾಗೃತಿ ಜಾಥಾದಲ್ಲಿ ವೈದ್ಯಾಧಿಕಾರಿ ಡಾ. ಅಚ್ಯುತ, ಸುಶೀಲಾಬಾಯಿ, ಅಂಕಿತಾ, ಆನಂದಮೂರ್ತಿ ಮತ್ತಿತರರು ಪಾಲ್ಗೊಂಡಿದ್ದರು.
Published on

ಭದ್ರಾವತಿ: ಮಳೆಗಾಲ ಆರಂಭದ ಹಿನ್ನೆಲೆಯಲ್ಲಿ ಮನೆಯ ಘನತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಅಚ್ಯುತ ಹೇಳಿದರು.

ತಾಲೂಕು ಸಾರ್ವಜನಿಕ ಆಸ್ಪತ್ರೆಯಿಂದ ನಗರದ ಭೂತನಗುಡಿ ಹಾಗೂ ಹೊಸಸಿದ್ದಾಪುರ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಡೆಂಘೆ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿ, ಮನೆ ವ್ಯಾಪಾರ ಮಳಿಗೆಗಳು ಸೇರಿ ಇತರ ಕಡೆಗಳಲ್ಲಿ ಬಿಸಾಡಿದ ತ್ಯಾಜ್ಯಗಳಲ್ಲಿ ನಿಲ್ಲುವ ನೀರಿನಲ್ಲಿ ಈಡಿಸ್ ಸೊಳ್ಳೆಗಳು ಮೊಟ್ಟೆಗಳನ್ನಿಟ್ಟು ಸಂತಾನಾಭಿವೃದ್ಧಿ ಮಾಡುತ್ತವೆ. ಸೋಂಕಿತ ಸೊಳ್ಳೆ ಕಚ್ಚುವುದರಿಂದ ಡೆಂಘೆ, ಚಿಕೂನ್‌ಗುನ್ಯಾ ರೋಗಗಳು ಹರಡುತ್ತವೆ ಎಂದು ತಿಳಿಸಿದರು.

ತೊಟ್ಟಿ, ಬಾನಿ, ಡ್ರಮ್‌ಗಳನ್ನು ಸೇರಿ ಇತ್ಯಾದಿಗಳನ್ನು ವಾರಕ್ಕೊಮ್ಮೆ ತೊಳೆಯಬೇಕು. ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಜ್ವರ ಬಂದಲ್ಲಿ ಕೂಡಲೇ ಸರ್ಕಾರಿ ಆಸ್ಪತ್ರೆಗಳಿಗೆ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ ಮಾತನಾಡಿ, ಕಾಯಿಲೆಗಳು ಹರಡದಂತೆ ತಡೆಗಟ್ಟಲು ಸಾರ್ವಜನಿಕರ ಸಹಕಾರ ಅಗತ್ಯ. ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿ ಘನತ್ಯಾಜ್ಯವನ್ನು ಸೂಕ್ತ ವಿಲೇವಾರಿ ಮಾಡಬೇಕು ಎಂದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆನಂದಮೂರ್ತಿ, ಎಪಿಡೆಮಾಲಜಿಸ್ಟ್ ಅಂಕಿತಾ, ಹಾಲಸ್ವಾಮಿ, ಸುನಂದಾಬಾಯಿ, ಲೋಕೇಶ್, ಚೇತನಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net