

ಶಿವಮೊಗ್ಗ: ಭಜರಂಗ ದಳದ ಕಾರ್ಯಕರ್ತನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ನಗರದ ಗುರುವಾರ ಗಾಂಧಿ ಬಜಾರ್, ಚೋರ್ ಬಜಾರ್ ನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದೆ.
ಗಾಂಧಿಬಜಾರ್ ನಲ್ಲಿ ಮೊದಲು ಪಾರ್ಕಿಂಗ್ ವಿಚಾರದಲ್ಲಿ ಗೊಂದಲದ ವಾತಾವರಣವಿತ್ತು. ಬಳಿಕ ಚೋರ್ ಬಜಾರ್ ನಲ್ಲಿ ಮೂವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.
ಟೆಂಪೋ ಸ್ಟ್ಯಾಂಡ್ ಬಳಿಯ ದಿನಸಿ ಅಂಗಡಿಗೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದು ಹಳೇ ಶಿವಮೊಗ್ಗ ಭಾಗದಲ್ಲಿ ಆತಂಕ ಸೃಷ್ಟಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಗಾಂಧಿಬಜಾರ್ ಮತ್ತು ಚೋರ್ ಬಜಾರ್ ನಲ್ಲಿ ಅಂಗಡಿಮುಂಗಟ್ಟುಗಳನ್ನು ಮುಚ್ಚಿಸಲಾಗಿದೆ.
ಸ್ಥಳಕ್ಕೆ ಎಸ್ಪಿ ಕೆ.ಎಂ.ಶಾಂತರಾಜು, ಡಿವೈಎಸ್ಪಿ ಉಮೇಶ್ ನಾಯ್ಕ್, ಸಿಪಿಐ ವಸಂತ್ ಕುಮಾರ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದರು.