ತೆನೆ ಇಳಿಸಿ ಕಮಲ ಮುಡಿದ ಎಚ್.ಟಿ.ಬಳಿಗಾರ

18 smg 3
Published on

ಶಿವಮೊಗ್ಗ: ನಿವೃತ್ತ ಕೆಎಎಸ್ ಅಧಿಕಾರಿ, ಶಿಕಾರಿಪುರದ ಜೆಡಿಎಸ್ ಮುಖಂಡ ಎಚ್.ಟಿ.ಬಳಿಗಾರ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾದರು.

ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಪಕ್ಷದ ಕಚೇರಿಯಲ್ಲಿ ನೂರಾರು ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾದರು. ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ನೀಡಿ, ಕೇಸರಿ ಶಾಲು ಹೊದಿಸಿ ಬಳಿಗಾರ ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.

ಗೃಹ ಸಚಿವ ಆರಗ ಜ್ಞಾನೇಂದ್ರ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಕೆ.ಎಸ್.ಈಶ್ವರಪ್ಪ, ಕೆ.ಬಿ.ಅಶೋಕನಾಯ್ಕ, ಎಂಎಲ್ಸಿ ಎಸ್.ರುದ್ರೇಗೌಡ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಎಂಎಡಿಬಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಮುಖಂಡರಾದ ಎಂ.ಬಿ.ಭಾನುಪ್ರಕಾಶ್, ಗಿರೀಶ್ ಪಟೇಲ್, ಎಸ್.ದತ್ತಾತ್ರಿ, ಸೂಡಾ ಅಧ್ಯಕ್ಷ ಎನ್.ಜೆ.ನಾಗರಾಜ್, ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net