ಪಕ್ಷದ ಭವಿಷ್ಯ ನಿರ್ಧರಿಸುವ ಸಮಯ: ಕಾಗೋಡು

DEEPAK
Published on

ಶಿವಮೊಗ್ಗ: ಜಿಲ್ಲೆಯಲ್ಲಿ ಕಾಂಗ್ರೆಸ್ ಭವಿಷ್ಯ ನಿರ್ಧರಿಸುವ ಸನ್ನಿವೇಶ ಸೃಷ್ಟಿಯಾಗಿದೆ. ಪ್ರತಿಯೊಬ್ಬ ಕಾರ್ಯಕರ್ತರೂ ಇದನ್ನು ಸವಾಲಾಗಿ ಸ್ವೀಕರಿಸಬೇಕು. ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಇಚ್ಚಾಶಕ್ತಿ ಪ್ರದರ್ಶಿಸಬೇಕೆಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ಗುರುವಾರ ಉತ್ತರ ಬ್ಲಾಕ್ ಕಾಂಗ್ರೆಸ್ ದೀಪಕ್ ಸಿಂಗ್ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಸುದೀರ್ಘ ಆಡಳಿತ ನಡೆಸಿದ್ದು ಕಾಂಗ್ರೆಸ್. ಜಿಲ್ಲೆಯಲ್ಲಿ ಪಕ್ಷ ಕುಸಿತ ಕಂಡಿದೆ. ಇದನ್ನು ಮತ್ತೆ ಕಟ್ಟಿ ನಿಲ್ಲಿಸಿ ಪ್ರವರ್ಧಮಾನಕ್ಕೆ ತರಲು ಎಲ್ಲರೂ ಕೈಜೋಡಿಸಬೇಕಿದೆ ಎಂದರು.

ಸಮಾಜವಾದಿ ಹಿನ್ನೆಲೆಯಿಂದ ಬಂದ ನಾನು ಕಾಂಗ್ರೆಸ್‌ನಲ್ಲಿ ಸಾರ್ಥಕತೆ ಕಂಡಿದ್ದೇನೆ. ಅನಾರೋಗ್ಯದ ನಡುವೆಯೂ ಮುಂದೆ ಪಕ್ಷದ ಬಲವರ್ಧನೆಗೆ ಶ್ರಮಿಸುತ್ತೇನೆ. ಈ ಜಿಲ್ಲೆ ಸಮಾಜವಾದ ಹಾಗೂ ಕಾಂಗ್ರೆಸ್ ನೆಲಗಟ್ಟಿನ ಭೂಮಿಯಾಗಿತ್ತು. ಮುಂದೆ ಪ್ರತಿ ತಾಲೂಕಿನಲ್ಲೂ ಹಿರಿಯ ಮುಖಂಡರನ್ನು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆ ಬಲಪಡಿಸಬೇಕಾದ ಅವಶ್ಯಕತೆಯಿದೆ ಎಂದು ತಿಳಿಸಿದರು.

ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಕುಮಾರಿ, ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ, ಉತ್ತರ ಬ್ಲಾಕ್ ಅಧ್ಯಕ್ಷ ದೀಪಕ್ ಸಿಂಗ್, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್, ಜಿ.ಪಲ್ಲವಿ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net