

ಶಿವಮೊಗ್ಗ: ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್.ಟಿ.ತಿಮ್ಮಪ್ಪ ಹೆಗಡೆ (94) ಅವರು ವಯೋಸಹಜ ಕಾಯಿಲೆಯಿಂದ ಮಂಗಳವಾರ (ಜ.17) ಬೆಳಗ್ಗೆ ಕೊನೆಯುಸಿರೆಳೆದರು.
ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಸ್ವಗ್ರಾಮ ಮಡಸೂರಿನಲ್ಲಿ ನಿಧರಾದರು. ತಿಮ್ಮಪ್ಪ ಅವರು 1978 ಹಾಗೂ 1983ರ ಚುನಾವಣೆಯಲ್ಲಿ ಗೆದ್ದು ಎರಡು ಬಾರಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. 1978 ರಲ್ಲಿ ಜನತಾ ಪಕ್ಷದಿಂದ ಸ್ಫರ್ಧಿಸಿದ್ದ ಕಾಗೋಡು ತಿಮ್ಮಪ್ಪ ವಿರುದ್ಧ ಕಾಂಗ್ರೆಸ್ನಿಂದ ಸ್ಫರ್ಧಿಸಿ ಎಲ್.ಟಿ.ತಿಮ್ಮಪ್ಪ ಹೆಗಡೆ ಗೆಲುವು ಸಾಧಿಸಿದ್ದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಸಾಗರ ಪ್ರಾಂತ್ಯದಲ್ಲಿ ಅಡಿಕೆ ಬೆಳೆಗಾರರ ಸಂಘ ಸ್ಥಾಪನೆ ಸೇರಿದಂತೆ ಅನೇಕ ಸಂಸ್ಥೆಗಳನ್ನು ಹುಟ್ಟು ಹಾಕುವಲ್ಲಿ ತಿಮ್ಮಪ್ಪ ಅವರು ಪ್ರಮುಖ ಪಾತ್ರ ವಹಿಸಿದ್ದರು.
ತಿಮ್ಮಪ್ಪ ಅವರ ಅಂತ್ಯಕ್ರಿಯೆ ಇಂದು ಸ್ವಗ್ರಾಮದಲ್ಲಿ ನೆರವೇರಲಿದೆ. (ದಿಗ್ವಿಜಯ ನ್ಯೂಸ್)