7ಕ್ಕೆ ಏಕವ್ಯಕ್ತಿ ನಾಟಕ ಪ್ರದರ್ಶನ: ಮಂಜುನಾಥ ಕದಂ

4 smg 1
Published on

ಶಿವಮೊಗ್ಗ: ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಆ.7ರ ಸಂಜೆ 6.30ಕ್ಕೆ ತಾಯಿಯಾಗುವುದೆಂದರೆ ಎಂಬ ಏಕವ್ಯಕ್ತಿ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. 100 ರೂ. ಪ್ರವೇಶ ದರ ನಿಗದಿಪಡಿಸಿದ್ದು ಸಂಗ್ರಹವಾಗುವ ಹಣವನ್ನು ತಾಲೂಕಿನ ಬೀರನಕೆರೆ ಸರ್ಕಾರಿ ಶಾಲೆ ಅಭಿವೃದ್ಧಿಗೆ ಬಳಸಲಾಗುವುದು ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಮಂಜುನಾಥ ಕದಂ ತಿಳಿಸಿದರು.

ಕೃಷ್ಣಮೂರ್ತಿ ಕವತ್ತಾರ್ ನಿರ್ದೇಶನದಲ್ಲಿ ಹಾಸನದ ರಂಗ ನಟಿ ಪೂಜಾ ರಘುನಂದನ್ ಏಕವ್ಯಕ್ತಿ ಪ್ರದರ್ಶನ ನೀಡಲಿದ್ದಾರೆ. ಶಿವಮೊಗ್ಗದಲ್ಲಿ ನಡೆಯಲಿರುವ ನಾಟಕದ ಎರಡನೇ ಪ್ರದರ್ಶನವಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶಿವಮೊಗ್ಗ ತಾಲೂಕಿನ ಬೀರನಕೆರೆ ಸರ್ಕಾರಿ ಶಾಲೆ ಅಭಿವೃದ್ಧಿಗೆ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ತೀರ್ಮಾನಿಸಿದೆ. ಇದಕ್ಕಾಗಿ ಸುಮಾರು 30 ಲಕ್ಷ ರೂ. ವೆಚ್ಚದ ಯೋಜನೆ ಸಿದ್ಧಗೊಂಡಿದೆ. ಜೆಸಿಐ, ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘದ ಮೂಲಕ ಇದುವರೆಗೆ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಇನ್ನೂ ಹಣದ ಕೊರತೆಯಿದೆ. ಇದಕ್ಕಾಗಿ ಏಕವ್ಯಕ್ತಿ ನಾಟಕ ಪ್ರದರ್ಶನ ಏರ್ಪಡಿಸಿ ಇದರಿಂದ ಬರುವ ಹಣವನ್ನೂ ಶಾಲೆ ಅಭಿವೃದ್ಧಿಗೆ ಬಳಸಲು ನಿರ್ಧರಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net