ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕರೊನಾ ವಾರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್: ತಪ್ಪದ ಭಾರೀ ಅನಾಹುತ

WhatsApp-Image-2020-11-22-at-17.37.18-768x576
Published on

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಕಟ್ಟಡದ ಕರೊನಾ ಯುನಿಟ್‌ನಲ್ಲಿ ಭಾನುವಾರ ಎರಡು ಬಾರಿ ಹೊಗೆ ಕಾಣಿಸಿಕೊಂಡಿದ್ದು, ವೈದ್ಯರು, ಸಿಬ್ಬಂದಿ, ರೋಗಿಗಳು ಮತ್ತವರ ಸಂಬಂಧಿಕರಲ್ಲಿ ಕೆಲಕಾಲ ಆತಂಕ ಮೂಡಿಸಿತ್ತು.
ಕರೊನಾ ವಾರ್ಡ್‌ಗೆ ಆಕ್ಸಿಜನ್ ಪೂರೈಕೆ ಮಾಡುವ ಎಚ್‌ಎಫ್‌ಎನ್‌ಸಿ ಯಂತ್ರವನ್ನು ಸತತವಾಗಿ ಚಾಲನೆಯಲ್ಲಿಟ್ಟಿರುವ ಕಾರಣ ಸ್ವಿಚ್ ಬೋರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು ದಟ್ಟ ಹೊಗೆ ಎದ್ದಿತ್ತು. ಕರೊನಾ ವಾರ್ಡ್‌ನಲ್ಲಿ ಬೆರಳೆಣಿಕೆಯಷ್ಟು ರೋಗಿಗಳು ಇದ್ದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ಎರಡು ಬಾರಿ ಹೊಗೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳದ ಜಿಲ್ಲಾ ಅಧಿಕಾರಿ ಅಶೋಕ್‌ಕುಮಾರ್, ಠಾಣಾಧಿಕಾರಿ ಪ್ರವೀಣ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net