166 ಕ್ವಿಂಟಾಲ್ ಪಡಿತರ ಅಕ್ಕಿ, ರಾಗಿ ಜಪ್ತಿ Anna Bhagya Scheme

ಶಿವಮೊಗ್ಗ: ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ಅನ್ನಭಾಗ್ಯ ಯೋಜನೆಯ 93 ಕ್ವಿಂಟಾಲ್ ಅಕ್ಕಿ ಮತ್ತು 85 ಕ್ವಿಂಟಾಲ್ ರಾಗಿಯನ್ನು ಜಪ್ತಿ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
Anna Bhagya Scheme
ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ಸಂಗ್ರಹಿಸಿಟ್ಟಿದ್ದ ಅಕ್ಕಿ ಮತ್ತು ರಾಗಿಯನ್ನು ಆಹಾರ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದರು.
Published on: 

ಶಿವಮೊಗ್ಗ: ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ಅನ್ನಭಾಗ್ಯ ಯೋಜನೆಯ 93 ಕ್ವಿಂಟಾಲ್ ಅಕ್ಕಿ ಮತ್ತು 85 ಕ್ವಿಂಟಾಲ್ ರಾಗಿಯನ್ನು ಜಪ್ತಿ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದ ಹಬೀಬ್ ಖಾನ್ ಬಂಧಿತ ಆರೋಪಿ. ಶುಕ್ರವಾರ ವೀರಾಪುರ ಗ್ರಾಮದಲ್ಲಿ ಅಬೀಬ್ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಆಹಾರ ಇಲಾಖೆಗೆ ಬಂದಿತ್ತು.

ಭದ್ರಾವತಿ ತಾಲೂಕಿನ ಗ್ರಾಮಾಂತರ ವಿಭಾಗದ ಆಹಾರ ನಿರೀಕ್ಷಕ ಬಸವರಾಜ್ ನೀಡಿದ ದೂರಿನ ಮೇರೆಗೆ ಭದ್ರಾವತಿ ಗ್ರಾಮಾಂತರ ಠಾಣೆಯ ಪಿಎಸ್‌ಐ ಶಿಲ್ಪಾ ನೇತೃತ್ವದಲ್ಲಿ ಪ್ರೊಬೇಷನರಿ ಪಿಎಸ್‌ಐ ಉದಯ್ ಕುಮಾರ್, ಸಿಬ್ಬಂದಿಗಳಾದ ಅರುಣ್, ಸಂತೋಷ್, ರಾಮಕೃಷ್ಣ, ಹನುಮಂತ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿತ್ತು.

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮತ್ತು ರಾಗಿಯನ್ನು ಮಾರಾಟ ಮಾಡಲು ಸಂಗ್ರಹಿಸಿಟ್ಟಿರುವುದಾಗಿ ಬಾಯ್ಬಿಟ್ಟಿದ್ದಾನೆ. ಒಟ್ಟಾರೆ 166 ಕ್ವಿಂಟಾಲ್ ಆಹಾರ ಧಾನ್ಯ ಜಪ್ತಿ ಮಾಡಿದ್ದು, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.