ದ್ವಿತೀಯ ಪಿಯುಸಿ ಪರೀಕ್ಷೆ ಮೊದಲ ದಿನ 246 ವಿದ್ಯಾರ್ಥಿಗಳು ಗೈರು । Second PU Exam

ಶಿವಮೊಗ್ಗ ಕಸ್ತೂರಿ ಬಾ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಪರಿಶೀಲಿಸಿದರು.
ಶಿವಮೊಗ್ಗ ಕಸ್ತೂರಿ ಬಾ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಪರಿಶೀಲಿಸಿದರು.
Published on
ಶಿವಮೊಗ್ಗ: ಜಿಲ್ಲಾದ್ಯಂತ ದ್ವಿತೀಯ ಪಿಯುಸಿ(Second PUC) ಪರೀಕ್ಷೆಗಳು ಶನಿವಾರದಿಂದ ಆರಂಭಗೊಂಡಿದ್ದು, ಮೊದಲ ದಿನ ಯಾವುದೇ ಸಮಸ್ಯೆಗಳು ಇಲ್ಲದೆ ಕನ್ನಡ ಪರೀಕ್ಷೆ ಸುಸೂತ್ರವಾಗಿ ನಡೆಯಿತು.
ಜಿಲ್ಲೆಯ 41 ಪರೀಕ್ಷಾ ಕೇಂದ್ರಗಳನ್ನು ತೆರದಿದ್ದು, ಮಾತೃಭಾಷೆ ಕನ್ನಡ(Kannada)ಕ್ಕೆ 15,309 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 15,063 ವಿದ್ಯಾರ್ಥಿಗಳು ಹಾಜರಾಗಿದ್ದರೆ, 246 ಮಂದಿ ನಾನಾ ಕಾರಣಗಳಿಂದ ಗೈರಾದರು.
ಮೊದಲ ಪರೀಕ್ಷೆಯಾದ ಕಾರಣ ಬಹಳಷ್ಟು ಪಾಲಕರು ಪರೀಕ್ಷಾ ಕೇಂದ್ರ(Examination center)ಗಳವರೆಗೆ ತಮ್ಮ ಮಕ್ಕಳನ್ನು ವಾಹನಗಳಲ್ಲಿ ಕರೆತಂದು ಬಿಟ್ಟರು. ವಿದ್ಯಾರ್ಥಿಗಳು ಬೆಳಗ್ಗೆಯೇ ಪರೀಕ್ಷಾ ಕೇಂದ್ರದ ಮುಂಭಾಗದಲ್ಲೇ ಅಂಟಿಸಿದ್ದ ಕೊಠಡಿ ಸಂಖ್ಯೆ ನೋಡಿಕೊಂಡು ತೆರಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಪರೀಕ್ಷೆ ಬರೆದ ನಂತರ ಮತ್ತೆ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಮಕ್ಕಳನ್ನು ಕರೆದೊಯ್ದರು.
ಪರೀಕ್ಷೆ ಸುಗಮವಾಗಿ ನಡೆಯಲು ಜಿಲ್ಲಾಡಳಿತ ಸಿಸಿ ಕ್ಯಾಮೆರಾ(Cc camara) ಅಳವಡಿಕೆ ಸೇರಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿತ್ತು. ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ತಲಾ ಮೂವರು ಅಧಿಕಾರಿಗಳ 12 ತಂಡ ರಚಿಸಲಾಗಿತ್ತು. ಪ್ರಶ್ನೆ ಪತ್ರಿಕೆ(Question paper) ಕೊಂಡೊಯ್ಯುವ ವಾಹನಗಳಿಗೆ ಪೊಲೀಸ್ ಭದ್ರತೆ(Police security) ಒದಗಿಸಿದ್ದು ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಗ್ರಾಮೀಣ ಭಾಗದ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲವಾಗುವಂತೆ ಉಚಿತವಾಗಿ ಕೆಎಸ್‌ಆರ್‌ಟಿಸಿ(Ksrtc) ಬಸ್ ಸೌಲಭ್ಯ ಒದಗಿಸಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net