ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಕಾಲ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿಯಾನ ನಡೆಯಲಿದೆ. ಪಕ್ಷದಿಂದ ಆಯ್ಕೆಯಾದ ಶಾಸಕರು, ಸಂಸದರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ಪ್ರತಿಯೊಬ್ಬ ಕಾರ್ಯಕರ್ತ ಕನಿಷ್ಠ 20 ಮನೆಗಳಿಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ್ ಭರ್ತಿ ಮಾಡುವ ಬಗ್ಗೆ ಮತದಾರರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದರು.