ಬಜೆಟ್ ಸ್ವಾವಲಂಬಿ ಭಾರತ ನಿರ್ಮಾಣದ ಸ್ಪಷ್ಟ ದೃಷ್ಟಿಕೋನ । Central Budget

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
Published on

ಪ್ರಮುಖ ಮುಖ್ಯಾಂಶಗಳು

  • ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ದೇಶಾದ್ಯಂತ ವ್ಯಾಪಕ ಪ್ರಶಂಸೆಗೆ ಪಾತ್ರ
  • ರಾಷ್ಟ್ರದ ದೀರ್ಘಕಾಲೀನ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ರೂಪಿಸಲಾದ ಬಜೆಟ್
  • ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ
ಶಿವಮೊಗ್ಗ: ಕೇಂದ್ರದ ವಿತ್ತ ಸಚಿವೆ(Finance Minister) ನಿರ್ಮಲಾ ಸೀತಾರಾಮನ್ ಮಂಡಿಸಿದ 9ನೇ ಬಜೆಟ್ ಆತ್ಮನಿರ್ಭರ ಭಾರತ, ವಿಕಸಿತ ಭಾರತ(Developed India) ಹಾಗೂ ಸ್ವಾವಲಂಬಿ ಭಾರತ ನಿರ್ಮಾಣದ ಸ್ಪಷ್ಟ ದೃಷ್ಟಿಕೋನ ಹೊಂದಿದ್ದು, ದೇಶಾದ್ಯಂತ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಕೇಂದ್ರದ ಬಜೆಟ್(Central budget) ಜನಪ್ರಿಯತೆಯ ಲೆಕ್ಕಾಚಾರಕ್ಕೆ ಮಂಡಿಸಿದ್ದಲ್ಲ. ಬದಲಿಗೆ ರಾಷ್ಟ್ರದ ದೀರ್ಘಕಾಲೀನ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ರೂಪಿಸಲಾಗಿದೆ. ಹಣಕಾಸು ಸಚಿವರು ಆರ್ಥಿಕ ಶಿಸ್ತನ್ನು ಬಜೆಟ್‌ನಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಾಗತಿಕ ಆರ್ಥಿಕ ಅಸ್ಥಿರತೆಗಳ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಅವರ 2047ರ ವಿಕಸಿತ ಭಾರತದ ಗುರಿಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹಲವು ಧೈರ್ಯಶಾಲಿ ಸುಧಾರಣೆಗಳನ್ನು ಕೈಗೊಳ್ಳಲಾಗಿದೆ ಎಂದರು.
2014ರ ಪೂರ್ವ ಯುಪಿಎ(UPA) ಸರ್ಕಾರದ ಅವಧಿಯಲ್ಲಿ ಮೂಲಭೂತ ಸೌಕರ್ಯಗಳಿಗೆ 2 ಲಕ್ಷ ಕೋಟಿ ರೂ. ಅನುದಾನ ನೀಡಲಾಗುತ್ತಿತ್ತು. ಆದರೆ ಎನ್‌ಡಿಎ(NDA) ಸರ್ಕಾರ ಬಂದ ಮೇಲೆ ಮೂಲಸೌಕರ್ಯಕ್ಕೆ 12.2 ಲಕ್ಷ ಕೋಟಿ ರೂ. ಮೀಸಲಿಡಲಾಗುತ್ತಿದೆ. ರಸ್ತೆ, ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಇತಿಹಾಸದಲ್ಲೇ ಅತ್ಯಧಿಕ ವೆಚ್ಚ ಮಾಡಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ದಿಕ್ಕಿನಲ್ಲಿ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಆಹಾರ ಮತ್ತು ವಾಣಿಜ್ಯ ಮೀನುಗಾರಿಕೆಗೆ ಶೇ.6ರಷ್ಟು ಹೆಚ್ಚುವರಿ ಅನುದಾನ ಒದಗಿಸಲಾಗಿದೆ ಎಂದು ಹೇಳಿದರು.
ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ಒಬಿಸಿ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಮಾಜಿ ಶಾಸಕ ಕೆ.ಬಿ.ಅಶೋಕ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಚ್.ಮಾಲತೇಶ್, ಒಬಿಸಿ ಜಿಲ್ಲಾಧ್ಯಕ್ಷ ಸುಧಾಕರ್, ಮಾಧ್ಯಮ ಪ್ರಮುಖ್ ಎಸ್.ಚಂದ್ರಶೇಖರ್, ಸಹ ಪ್ರಮುಖ್ ಎನ್.ಮಂಜುನಾಥ್ ಸುದ್ದಿಗೋಷ್ಠಿಯಲ್ಲಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net