ಸೊರಬದ ಮಾವಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪದಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ನಾಗರಾಜ್, ಸೌಭಾಗ್ಯಾ, ಹಾಲೇಶ್ ನವುಲೆ, ಇಂದಿರಾ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಪ್ರತಿಭಾ ಕಾರಂಜಿಯಿಂದ ಮಕ್ಕಳಿಗೆ ಅನುಕೂಲ
ಸಾಂಸ್ಕೃತಿಕ ಮತ್ತು ಸಾಹಿತ್ಯ ಪ್ರತಿಭೆ ಗುರುತಿಸಲು ಸಹಕಾರಿ
ಸೊರಬ: ಪ್ರತಿಭಾ ಕಾರಂಜಿ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಗುರುತಿಸಲು ಮಹತ್ವದ ವೇದಿಕೆ ಎಂದು ಮಾವಲಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ನಾಗರಾಜ್ ಎಂದು ಹೇಳಿದರು.
ತಾಲೂಕಿನ ಮಾವಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದರು.
ಪ್ರತಿಭಾ ಕಾರಂಜಿಯಿಂದ ವಿದ್ಯಾರ್ಥಿಗಳಿಗೆ ಮನರಂಜನೆಯೊಂದಿಗೆ ಶಿಕ್ಷಣ ಸಂಯೋಜಿಸುವ ಮೂಲಕ ಕಲಿಯಲು ಮತ್ತು ಹೊಸ ಕೌಶಲಗಳನ್ನು ಪಡೆಯಲು ವೇದಿಕೆ ಒದಗಿಸುತ್ತದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೂ ದಾರಿಯಾಗುತ್ತದೆ. ವಿದ್ಯಾರ್ಥಿಗಳಲ್ಲಿರುವ ಸಾಂಸ್ಕೃತಿಕ, ಸಾಹಿತ್ಯ ಮತ್ತು ಇತರ ಪ್ರತಿಭೆಗಳನ್ನು ಗುರುತಿಸಲು ಸಹಾಯಕವಾಗಿದೆ ಎಂದು ತಿಳಿಸಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸೌಭಾಗ್ಯಾ, ಚನ್ನಾಪುರ ಶಾಲೆ ಮುಖ್ಯ ಶಿಕ್ಷಕ ಹಾಲೇಶ್ ನವುಲೆ, ಮಾವಲಿ ಶಾಲೆ ಮುಖ್ಯಶಿಕ್ಷಕಿ ಇಂದಿರಾ, ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಜರಿದ್ದರು.