ಶಿಕ್ಷಣ ಕ್ಷೇತ್ರದಲ್ಲಿ ಕೆಪಿಎಸ್ ಶಾಲೆಗಳಿಂದ ಮಹತ್ತರ ಬದಲಾವಣೆ

ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಸರ್ಕಾರಿ ಪ್ರೌಢಶಾಲಾ ನೂತನ ಕಟ್ಟಡವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಆರಗ ಜ್ಞಾನೇಂದ್ರ, ಆರ್.ಎಂ.ಮಂಜುನಾಥಗೌಡ, ರಮೇಶ ಹಲಸಿನಹಳ್ಳಿ ಇತರರಿದ್ದರು.
ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಸರ್ಕಾರಿ ಪ್ರೌಢಶಾಲಾ ನೂತನ ಕಟ್ಟಡವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಆರಗ ಜ್ಞಾನೇಂದ್ರ, ಆರ್.ಎಂ.ಮಂಜುನಾಥಗೌಡ, ರಮೇಶ ಹಲಸಿನಹಳ್ಳಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಮಧು ಬಂಗಾರಪ್ಪ ಹೇಳಿಕೆ
  • ನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಕೊಠಡಿಗಳ ಸಮುಚ್ಛಯ ಉದ್ಘಾಟನೆ
  • ಕೆಪಿಎಸ್ ಶಾಲೆಗೆ ರಾಜ್ಯಾದ್ಯಂತ ಹೆಚ್ಚಿದ ಬೇಡಿಕೆ
ಹೊಸನಗರ: ತಾಲೂಕಿನ ನಗರಕ್ಕೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನೀಡಲು ಕ್ರಮ ವಹಿಸುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ತಾಲೂಕಿನ ನಗರ ಚಿಕ್ಕಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆಪಿಸಿಎಲ್ ನಿರ್ಮಿಸಿದ 60 ಲಕ್ಷ ರೂ. ವೆಚ್ಚದ ನಾಲ್ಕು ಕೊಠಡಿಗಳ ಸಮುಚ್ಛಯ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ ಕ್ರಾಂತಿ ಉಂಟು ಮಾಡಿದೆ. ಇಂಗ್ಲೀಷ್ ಭಾಷೆ ಕಾರಣಕ್ಕಾಗಿ ಸರ್ಕಾರಿ ಶಾಲೆಗಳಲ್ಲಿ ಎಷ್ಟೇ ಸೌಲಭ್ಯ ನೀಡಿದರೂ ಕೂಡ ಮಕ್ಕಳು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ, ಶಿಕ್ಷಣೇತರ ಸೇರಿ ಗುಣಮಟ್ಟದ ಶಿಕ್ಷಣ ನೀಡಲು ಕೆಪಿಎಸ್ ಉಪಯುಕ್ತವಾಗಿದೆ ಎಂದು ತಿಳಿಸಿದರು.
ರಾಜ್ಯಾದ್ಯಂತ 900 ಕೆಪಿಎಸ್ ಶಾಲೆ ತೆರೆಯಲು ಬಜೆಟ್‌ನಲ್ಲಿ ನಿಗದಿ ಮಾಡಲಾಗಿತ್ತು. ಇದೀಗ ಎಲ್ಲೆಡೆಯಿಂದ ಬೇಡಿಕೆ ಬರುತ್ತಿದ್ದು, ಸಂಖ್ಯೆ 1300ರ ಗಡಿ ದಾಟಿದೆ. ಕರ್ನಾಟಕ ಪಬ್ಲಿಕ್ ಸ್ಕೂಲ್ ಸ್ಥಾಪನೆಗೆ ಹಣದ ಕೊರತೆ ಇಲ್ಲ ಎಂದರು.
"

ನಗರ ಹೋಬಳಿ ಮುಳುಗಡೆ ಮತ್ತು ಭೂಮಿ ಹಕ್ಕುಪತ್ರ ಸಮಸ್ಯೆಯಿಂದ ಬಳಲುತ್ತಿದೆ. ಅಡಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ಬಿದನೂರು ಅಭಿವೃದ್ಧಿ ಪ್ರಾಧಿಕಾರ ರಚಿಸಲು ಸರ್ಕಾರ ಮುಂದಾಗಬೇಕು.ಆರ್.ಎಂ.ಮಂಜುನಾಥ ಗೌಡಎಂಎಡಿಬಿ ಅಧ್ಯಕ್ಷ

ನಗರ ಚಿಕ್ಕಪೇಟೆ ಪ್ರೌಢಶಾಲಾ ವ್ಯಾಪ್ತಿಯಲ್ಲಿ ಉತ್ತಮ ಜಾಗ, ಹೊಸ ಕಟ್ಟಡ ನಿರ್ಮಾಣಗೊಂಡ ಹಿನ್ನೆಲೆ ಕೆಪಿಎಸ್ ಶಾಲೆ ಮಂಜೂರು ಮಾಡುವಂತೆ ಸಾಮಾಜಿಕ ಕಾರ್ಯಕರ್ತ ರವಿಶಾಸ್ತ್ರಿ ನೇತೃತ್ವದಲ್ಲಿ ಶಾಲಾಭಿವೃದ್ಧಿ ಸಮಿತಿ ಮನವಿ ಸಲ್ಲಿಸಿತು. ಈ ಬಗ್ಗೆ ವರದಿ ನೀಡುವಂತೆ ಬಿಇಒ ಗಣೇಶ್‌ಗೆ ಸೂಚಿಸಿದರು.
ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ನಗರ ಹೋಬಳಿಯ ಕರಿಮನೆ ಸೇರಿ ಬಹುತೇಕ ಜನರು ಅರಣ್ಯ ಹಕ್ಕು ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಬೇಕಿದೆ ಎಂದರು.
ತಾಯಿ ಮಡಿಲು ಯೋಜನೆಗೆ ಚಾಲನೆ ನೀಡಲಾಯಿತು. ವಿದ್ಯಾರ್ಥಿ ಸಾಧಕರನ್ನು ಸನ್ಮಾನಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಹಲಸಿನಹಳ್ಳಿ, ಉಪಾಧ್ಯಕ್ಷೆ ಅಶ್ವಿನಿ ರಮೇಶ್, ಗ್ರಾಪಂ ಅಧ್ಯಕ್ಷೆ ಸಂಗೀತಾ, ಉಪಾಧ್ಯಕ್ಷೆ ಸುಮನಾ ಭಾಸ್ಕರ್, ತಹಸೀಲ್ದಾರ್ ಭರತರಾಜ್, ಬಿಇಒ ವೈ.ಗಣೇಶ್, ಮುಖ್ಯಶಿಕ್ಷಕ ಡಾ. ಜಿ.ಸುಧಾಕರ್, ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಕಲಗೋಡು ರತ್ನಾಕರ, ಸುಮಾ ಸುಬ್ರಹ್ಮಣ್ಯ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net