ಬಿಇಒ ಕಚೇರಿ ಮಾದರಿಯಲ್ಲೇ ಸರ್ಕಾರದ ಅನುದಾನ ನಿರೀಕ್ಷಿಸದೆ ಸ್ಥಳೀಯ ಮೂಲಗಳಿಂದ ಆದಾಯ ಸಂಗ್ರಹಿಸಿ ಅವಶ್ಯವಿರುವ ಮೂಲ ಸೌಕರ್ಯ ಕಲ್ಪಿಸಲು ಶಿಕ್ಷಕರಿಗೆ ಸಲಹೆ ನೀಡಲಾಗುತ್ತಿದೆ. ದಾನಿಗಳು, ಹಳೇ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರ ನೆರವು(Assistance from SDMC members) ಪಡೆದು ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ, ಕೊಠಡಿಗಳ ದುರಸ್ತಿ, ಭದ್ರತಾ ಗೋಡೆ ನಿರ್ಮಾಣ ಒಳಗೊಂಡಂತೆ ಅಗತ್ಯ ಕೆಲಸ ಮಾಡಿಸಿಕೊಳ್ಳಬೇಕು. ಅಲ್ಲದೆ ಸರ್ಕಾರದ ಆದೇಶದಂತೆ ಸಂವಿಧಾನ ಪೀಠಿಕೆಯನ್ನೂ ಅಳವಡಿಸಿಕೊಳ್ಳಲು ಸಲಹೆಗಳನ್ನು ನೀಡಲಾಗಿದೆ ಎನ್ನುತ್ತಾರೆ ಶಿವಮೊಗ್ಗ ಬಿಇಒ ರಮೇಶ್.