ಸ್ನಾತಕೋತ್ತರ ಪದವಿ ಪ್ರವೇಶಾತಿ ಮುಂದುವರಿಕೆಗೆ ಎಬಿವಿಪಿ ಒತ್ತಾಯ | Postgraduate Degree

ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ಸ್ನಾತಕೋತ್ತರ ಪದವಿ ಪ್ರವೇಶಾತಿ ಮುಂದುವರಿಸುವಂತೆ ಒತ್ತಾಯಿಸಿ ಎಬಿವಿಪಿ ಪದಾಧಿಕಾರಿಗಳು ಕುವೆಂಪು ವಿವಿ ಪ್ರಭಾರ ಕುಲಸಚಿವ ಎನ್.ಹೇಮಂತ್ ಅವರಿಗೆ ಮನವಿ ಸಲ್ಲಿಸಿದರು. ರವಿ ಇರೋಜಿ, ಆದಿತ್ಯ ಶೆಟ್ಟಿ, ನಂದನ್, ವಿನಯ್ ಹಿರೇಮಳಲಿ ಇದ್ದರು.
ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ಸ್ನಾತಕೋತ್ತರ ಪದವಿ ಪ್ರವೇಶಾತಿ ಮುಂದುವರಿಸುವಂತೆ ಒತ್ತಾಯಿಸಿ ಎಬಿವಿಪಿ ಪದಾಧಿಕಾರಿಗಳು ಕುವೆಂಪು ವಿವಿ ಪ್ರಭಾರ ಕುಲಸಚಿವ ಎನ್.ಹೇಮಂತ್ ಅವರಿಗೆ ಮನವಿ ಸಲ್ಲಿಸಿದರು. ರವಿ ಇರೋಜಿ, ಆದಿತ್ಯ ಶೆಟ್ಟಿ, ನಂದನ್, ವಿನಯ್ ಹಿರೇಮಳಲಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ಸ್ನಾತಕೋತ್ತರ ಪದವಿ ಪ್ರವೇಶಾತಿ
  • ಕುವೆಂಪು ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವ ಎನ್.ಹೇಮಂತ್ ಅವರಿಗೆ ಮನವಿ
  • ಎಂಎಸ್ಸಿ, ಎಂಎಗೆ ಪ್ರವೇಶಾತಿ ನೀಡದೆ ಇರುವುದು ನೂರಾರು ವಿದ್ಯಾರ್ಥಿಗಳಲ್ಲಿ ಆತಂಕ
ಶಿವಮೊಗ್ಗ: ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ಸ್ನಾತಕೋತ್ತರ ಪದವಿ(Postgraduate Degree) ಪ್ರವೇಶಾತಿ ಮುಂದುವರಿಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಎಬಿವಿಪಿ (ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್) ಪದಾಧಿಕಾರಿಗಳು ಕುವೆಂಪು ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವ ಎನ್.ಹೇಮಂತ್ ಅವರಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜು(Sahyadri Arts College), ಸಹ್ಯಾದ್ರಿ ವಿಜ್ಞಾನ ಕಾಲೇಜು(Sahyadri Science College)ಗಳು ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಆಶಾಕಿರಣಗಳಾಗಿವೆ. ಆದರೆ, ಪ್ರಸಕ್ತ ಸಾಲಿನಲ್ಲಿ ಈ ಕಾಲೇಜುಗಳಲ್ಲಿ ಎಂಎಸ್ಸಿ ಮತ್ತು ಎಂಎ ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ನೀಡದೆ ಇರುವುದು ಸ್ಥಳೀಯ ಹಾಗೂ ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಭವಿಷ್ಯದ ಬಗ್ಗೆ ದಿಗಿಲನ್ನು ಉಂಟುಮಾಡಿದೆ ಎಂದು ದೂರಿದರು.
ಖಾಸಗಿ ಕಾಲೇಜು(Private college)ಗಳ ದುಬಾರಿ ಶುಲ್ಕ ಭರಿಸಲಾಗದ ಎಷ್ಟೋ ಪ್ರತಿಭಾವಂತ ವಿದ್ಯಾರ್ಥಿಗಳು ಸಹ್ಯಾದ್ರಿ ಕಾಲೇಜುಗಳನ್ನೇ ನಂಬಿಕೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪ್ರವೇಶಾತಿ ತಡೆಹಿಡಿಯುವುದು ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದಂತಾಗುತ್ತದೆ. ಹಾಗೆಯೇ ಯುಯುಸಿಎಂಎಸ್ ತಂತ್ರಾಂಶ(UUCMS software)ದ ಸಮಸ್ಯೆ ಅತ್ಯಧಿಕವಾಗಿದ್ದು, ಅದರ ಕಡೆಯೂ ಗಮನ ಹರಿಸಬೇಕು ಮತ್ತು ಬಿಸಿಎ ಅಂತಿಮ ವರ್ಷದ ವಿದ್ಯಾರ್ಥಿಗಳ ಶುಲ್ಕ ಹೆಚ್ಚುವರಿಯಾಗಿದ್ದು ಅದನ್ನೂ ಪರಿಷ್ಕರಿಸಬೇಕು ಎಂದು ಒತ್ತಾಯಿಸಿದರು.
ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಎಲ್ಲ ಎಂಎಸ್ಸಿ ಮತ್ತು ಎಂಎ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆ(Admission process)ಯನ್ನು ಆರಂಭಿಸಬೇಕು. ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೀಟುಗಳ ಸಂಖ್ಯೆ ಕಡಿತಗೊಳಿಸದೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಬಿಸಿಎ ಶುಲ್ಕ ಪರಿಷ್ಕರಿಸಬೇಕು. ಯುಯುಸಿಎಂಎಸ್ ತಂತ್ರಾಂಶ ಸರಿಪಡಿಸಬೇಕು. ಒಂದು ವೇಳೆ ವಿವಿಯು ವಿದ್ಯಾರ್ಥಿ ವಿರೋಧಿ ಧೋರಣೆ ತಳೆದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ ನೀಡದೆ ನಿರ್ಲಕ್ಷ್ಯ ವಹಿಸಿದರೆ ಎಬಿವಿಪಿ ಉಗ್ರವಾಗಿ ವಿರೋಧಿಸುತ್ತದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಹಿತರಕ್ಷಣೆಗಾಗಿ ವಿವಿಯಾದ್ಯಂತ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಪದಾಧಿಕಾರಿಗಳು ಎಚ್ಚರಿಕೆ ನೀಡಿದರು.
ವಿಭಾಗ ಸಂಚಾಲಕ ರವಿ ಇರೋಜಿ, ವಿಭಾಗ ಸಂಘಟನಾ ಕಾರ್ಯದರ್ಶಿ ಆದಿತ್ಯ ಶೆಟ್ಟಿ, ಜಿಲ್ಲಾ ಸಂಚಾಲಕ ನಂದನ್, ಶಿವಮೊಗ್ಗ ನಗರ ಸಹ ಕಾರ್ಯದರ್ಶಿ ವಿನಯ್ ಹಿರೇಮಳಲಿ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net