

ಶಿವಮೊಗ್ಗ: ಕಳೆದ 11 ವರ್ಷಗಳಿಂದ ಅಕ್ರಮ ಮದ್ಯ ಮಾರಾಟ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿಯ ಗಿರೀಶ್ ನಾಯ್ಕ ಬಂಧಿತ ಆರೋಪಿ. ಈತನ ವಿರುದ್ಧ ಕರ್ನಾಟಕ ಎಕ್ಸೈಸ್ ಕಾಯ್ದೆಯಡಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗಿರಲಿಲ್ಲ. ಹಾಗಾಗಿ ಈತನ ವಿರುದ್ಧ ಎಸಿಜೆ ಮತ್ತು ಜೆಂಎಫ್‌ಸಿ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಿತ್ತು.
ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.