ಡ್ರಗ್ಸ್ ಕೇಸ್‌ಗಳನ್ನು ಪತ್ತೆ ಮಾಡಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಹಾಗಾಗಿ ಯುವ ಜನತೆಯಲ್ಲಿ ಜಾಗೃತಿ(Awareness) ಮೂಡಿಸುವ ಕೆಲಸ ಆಗಲಿದೆ. ಜತೆಗೆ ಪುನರ್ವಸತಿ ಕೇಂದ್ರ(Rehabilitation Centre)ಗಳಿಗೆ ಕಳುಹಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಮೊದಲ ಆದ್ಯತೆಯಾಗಿದೆ. ಸಂತ್ರಸ್ತರು ಅಥವಾ ನೊಂದವರು ಠಾಣೆಗೆ ಬಂದರೆ ಗೌರವಪೂರ್ವಕವಾಗಿ ನಡೆಸಿಕೊಳ್ಳಬೇಕೆಂದು ನಮ್ಮ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಎಎಸ್‌ಪಿಗಳಾದ ಎ.ಜಿ.ಕಾರ್ಯಪ್ಪ, ರಮೇಶ್‌ಕುಮಾರ್, ಪ್ರೊಬೆಷನರಿ ಐಪಿಎಸ್ ಅಧಿಕಾರಿ ಮೇಘಾ ಅಗರ್‌ವಾಲ್ ಸುದ್ದಿಗೋಷ್ಠಿಯಲ್ಲಿದ್ದರು.