ಅಡ್ಡಪಲ್ಲಕ್ಕಿ ಉತ್ಸವ ಸಂಸ್ಕೃತಿ ಜಾಗೃತಿಯ ಸಂಕೇತ | meeting

ಶಿವಮೊಗ್ಗದಲ್ಲಿ ಆಯೋಜಿಸಿರುವ ಶ್ರೀ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಬಿ.ಎಸ್.ಯಡಿಯೂರಪ್ಪ ಅವರ ಅಭಿನಂದನಾ ಸಮಾರಂಭದ ಆಹ್ವಾನ ಪತ್ರಿಕೆಯನ್ನು ಶಾಸಕ ಬಿ.ಕೆ.ಸಂಗಮೇಶ್ವರ್‌ಗೆ ನೀಡಿ ಆಹ್ವಾನಿಸಲಾಯಿತು. ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಸಿ.ಎಸ್.ಷಡಾಕ್ಷರಿ, ಆಯನೂರು ಮಂಜುನಾಥ್ ಇತರರಿದ್ದರು.
ಶಿವಮೊಗ್ಗದಲ್ಲಿ ಆಯೋಜಿಸಿರುವ ಶ್ರೀ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಬಿ.ಎಸ್.ಯಡಿಯೂರಪ್ಪ ಅವರ ಅಭಿನಂದನಾ ಸಮಾರಂಭದ ಆಹ್ವಾನ ಪತ್ರಿಕೆಯನ್ನು ಶಾಸಕ ಬಿ.ಕೆ.ಸಂಗಮೇಶ್ವರ್‌ಗೆ ನೀಡಿ ಆಹ್ವಾನಿಸಲಾಯಿತು. ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಸಿ.ಎಸ್.ಷಡಾಕ್ಷರಿ, ಆಯನೂರು ಮಂಜುನಾಥ್ ಇತರರಿದ್ದರು.
Published on
ಭದ್ರಾವತಿ: ಶಿವಮೊಗ್ಗದಲ್ಲಿ ಮೇ 17ರಂದು ನಡೆಯಲಿರುವ ಶ್ರೀ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿನಂದನಾ ಸಮಾರಂಭವನ್ನು ಯಶಸ್ವಿಗೊಳಿಸುವ ಸಲುವಾಗಿ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ ಸ್ವಾಮೀಜಿ ನೇತೃತ್ವದಲ್ಲಿ ಕೋಟೆ ಬಸವೇಶ್ವರ ಸಮುದಾಯ ಭವನದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಶ್ರೀಗಳು, ಶಿವಮೊಗ್ಗದಲ್ಲಿ ಐವರು ಜಗದ್ಗುರುಗಳು ಏಕಕಾಲದಲ್ಲಿ ಪದಾರ್ಪಣೆ ಮಾಡುತ್ತಿರುವುದು ಜಿಲ್ಲೆಯ ಸೌಭಾಗ್ಯ. ಅಡ್ಡಪಲ್ಲಕ್ಕಿ ಉತ್ಸವವು ಕೇವಲ ಸಂಪ್ರದಾಯವಲ್ಲ. ಅದು ನಮ್ಮ ಸಂಸ್ಕೃತಿ ಜಾಗೃತಿಯ ಸಂಕೇತ. ಸಮಾಜದ ಏಕತೆ ಮತ್ತು ಶಾಂತಿಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಸಮಿತಿ ಕಾರ್ಯಾಧ್ಯಕ್ಷ ಆಯನೂರು ಮಂಜುನಾಥ್ ಮಾತನಾಡಿ, ಜಗದ್ಗುರುಗಳು ಉತ್ಸವದೊಂದಿಗೆ ನಾಡಿನ ಹಿರಿಯನಾಯಕ ಬಿ.ಎಸ್.ಯಡಿಯೂರಪ್ಪನವರನ್ನು ಅಭಿನಂದಿಸುತ್ತಿರುವುದು ಹೆಮ್ಮೆಯ ವಿಷಯ. ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಎಲ್ಲರೂ ಒಂದಾಗಿ ಈ ಐತಿಹಾಸಿಕ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿ.ಎಸ್.ಷಡಾಕ್ಷರಿ, ಶಾಸಕ ಬಿ.ಕೆ.ಸಂಗಮೇಶ್ವರ್ ಸೇರಿ ಸಮಸ್ತ ಸಮಾಜದ ಸಹಭಾಗಿತ್ವದಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಚರಿಸಲಾಗುತ್ತಿದೆ. ಜನರಿಗೆ ಯಾವುದೇ ತೊಂದರೆ ಆಗದಂತೆ ಮೆರವಣಿಗೆ ಮತ್ತು ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಜಗದ್ಗುರುಗಳ ದಿವ್ಯ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ಸಮಿತಿಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಬಿ.ಕೆ.ಮೋಹನ್, ಬಿ.ಕೆ.ಜಗದೀಶ್, ವಿಜಯಕುಮಾರ್, ಬಸವೇಶ್, ಬಳ್ಳೆಕೆರೆ ಸಂತೋಷ್, ತಮ್ಮಡಿಹಳ್ಳಿ ನಾಗರಾಜ್, ಮೋಹನ್‌ಕುಮಾರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net