ಶಿವಮೊಗ್ಗ ಡಿವಿಎಸ್ ಕಾಲೇಜಿನಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತರನ್ನು ಗೌರವಿಸಲಾಯಿತು. ಬಿ.ಸಿ.ಪಾಟೀಲ್,, ಕೆ.ಬಸಪ್ಪ ಗೌಡ, ಜಿ.ಮಧುಸೂದನ್, ಎಸ್.ಪಿ.ದಿನೇಶ್, ರಾಜೇಂದ್ರ, ಡಾ. ಎಂ.ವೆಂಕಟೇಶ್ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ
ವಿದ್ಯಾರ್ಥಿಗಳಿಗೆ ಬಿ.ಸಿ.ಪಾಟೀಲ್ ಕಿವಿಮಾತು
ಶಿವಮೊಗ್ಗ: ಜೀವನದಲ್ಲಿ ಎದುರಾಗುವ ಕಷ್ಟದ ಪರಿಸ್ಥಿತಿಗಳನ್ನು (situations) ಸವಾಲಾಗಿ (challenge) ಸ್ವೀಕರಿಸಬೇಕು. ನಿರಂತರ ಪರಿಶ್ರಮದಿಂದ ಮುನ್ನಡೆದಾಗ ಸಾಧನೆ (achivement) ಸಾಧ್ಯ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟರು.
ನಗರದ ಕುವೆಂಪು ರಂಗಮಂದಿರದಲ್ಲಿ ಡಿವಿಎಸ್ ಕಾಲೇಜಿನಿಂದ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ನಾನು ಡಿವಿಎಸ್ ಕಾಲೇಜಿನಲ್ಲೇ ವ್ಯಾಸಂಗ ಮಾಡಿದ್ದು, ಇಂದು ಅದೇ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಖುಷಿ ನೀಡಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಮೊಬೈಲ್‌ಗಳನ್ನು ದೂರವಿಟ್ಟು ವಾಸ್ತವಗಳನ್ನು ಅರ್ಥ ಮಾಡಿಕೊಂಡು ಸಾಧನೆಗೆ ಹೊಸ ವೇದಿಕೆ ಸೃಷ್ಟಿಸಿಕೊಳ್ಳಬೇಕು. ಬಹಳ ಮುಖ್ಯವಾಗಿ ಜಾಗತಿಕ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ಒಳಿತು ಮತ್ತು ಕೆಡಕನ್ನು ಪ್ರತ್ಯೇಕಿಸಿ ಅರ್ಥೈಸಿಕೊಳ್ಳುವುದು ಸುಲಭದ ಮಾತಲ್ಲ. ಆದ್ದರಿಂದ ಅಂತರ್ಜಾಲ ಮತ್ತು ಸಾಮಾಜಿಕ ಮಾಧ್ಯಮಗಳ ಗೀಳಿಗೆ ಒಳಗಾಗಬಾರದು ಎಂದರು.
ಕಾಲೇಜಿನ ಹಿರಿಯ ವಿದ್ಯಾರ್ಥಿ, ಎಎಸ್ಪಿ ರಾಜೇಂದ್ರ ಮಾತನಾಡಿ, ವಿದ್ಯಾರ್ಥಿಗಳಿಗೆ ಇಂದಿನ ಪರಿಸ್ಥಿತಿಯಲ್ಲಿ ಹೇಗೆ ತಮ್ಮ ವರ್ತನೆಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದೆ ಹೇಗೆ ಸಾಧನೆ ಹಾದಿಯಲ್ಲಿ ಸಾಗಬೇಕು ಎಂಬ ಬಗ್ಗೆ ಮಾರ್ಗದರ್ಶನ ನೀಡಿದರು.
ಡಿವಿಎಸ್ ಅಧ್ಯಕ್ಷ ಕೆ.ಬಸಪ್ಪ ಗೌಡ, ಕಾರ್ಯದರ್ಶಿ ಎಸ್.ಪಿ.ದಿನೇಶ್, ಉಪಾಧ್ಯಕ್ಷ ಜಿ.ಮಧುಸೂದನ್, ಸಹಕಾರ್ಯದರ್ಶಿ ಡಾ. ಎ.ಸತೀಶ್‌ಕುಮಾರ್ ಶೆಟ್ಟಿ, ನಿರ್ದೇಶಕ ಕೆ.ಎನ್.ರುದ್ರಪ್ಪ ಕೊಳಲೆ, ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ, ಅಶೋಕ್ ಪಾಟೀಲ್ ಉಪಸ್ಥಿತರಿದ್ದರು.