ಹೊಸನಗರ: ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ಅಂಗಡಿಗಳ ಮೇಲೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ದಾಳಿ ನಡೆಸಿ ಹತ್ತಾರು ಕೆ.ಜಿ ಪ್ಲಾಸ್ಟಿಕ್ ವಶಕ್ಕೆ ಪಡೆದು ಐದು ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ.
ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಈಗಾಗಲೇ ಸರ್ಕಾರ ಆದೇಶಿಸಿದ ಬಳಿಕವೂ ವ್ಯಾಪಾರಿಗಳು ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದರು. ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಈ ವೇಳೆ ಹಲವು ಅಂಗಡಿಗಳು ಪಂಚಾಯಿತಿ ಪರವಾನಗಿ ಪಡೆಯದೆ ವ್ಯಾಪಾರ ನಡೆಸುತ್ತಿರುವ ಗಮನಕ್ಕೆ ಬಂದಿದೆ.
ವ್ಯಾಪಾರಿಗಳು ಪರವಾನಗಿ ಪಡೆದು ವ್ಯವಹಾರ ನಡೆಸಬೇಕು. ಇಲ್ಲದಿದ್ದಲ್ಲಿ ಮಳಿಗೆಗೆ ಬೀಗ ಹಾಕುತ್ತೇವೆ ಎಂದು ಮುಖ್ಯಾಧಿಕಾರಿ ಎಂ.ಎನ್.ಹರೀಶ್ ಎಚ್ಚರಿಕೆ ನೀಡಿದರು. ಪಪಂ ಸಿಬ್ಬಂದಿ ಮಂಜುನಾಥ, ಪರಶುರಾಮ, ನಾಗರಾಜ್ ಮತ್ತಿತರರು ಹಾಜರಿದ್ದರು.