ಶೋಕಿ, ಮೋಜು-ಮಸ್ತಿಗೆ ಕೃಷಿ ಸೀಮಿತವಾಗಬಾರದು

ಕೃಷಿ ಮೇಳದ ಎರಡನೇ ದಿನದ ಕಾರ್ಯಕ್ರಮವನ್ನು ರಾಜ್ಯಸಭೆ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಡಾ. ಆರ್.ಸಿ.ಜಗದೀಶ್, ಎಂ.ಜೆ.ದಿನೇಶ್, ಡಾ. ಬಿ.ಕೆ.ಕುಮಾರಸ್ವಾಮಿ, ಜೆ.ಜಿ.ಕಾವೇರಿಯಪ್ಪ, ಎಚ್.ಡಿ.ದೇವಿಕುಮಾರ್, ಎಚ್.ಎಸ್.ಶಶಾಂಕ್, ಗೀತಾ, ಮುರಳೀಧರ್, ಶ್ರೀ ಹರಿಕೃಷ್ಣ, ಡಾ. ಜಿ.ಕೆ.ಗಿರಿಜೇಶ್, ಡಾ. ಬಿ.ಎಂ.ದುಷ್ಯಂತ್‌ಕುಮಾರ್ ಇದ್ದರು.
ಕೃಷಿ ಮೇಳದ ಎರಡನೇ ದಿನದ ಕಾರ್ಯಕ್ರಮವನ್ನು ರಾಜ್ಯಸಭೆ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಡಾ. ಆರ್.ಸಿ.ಜಗದೀಶ್, ಎಂ.ಜೆ.ದಿನೇಶ್, ಡಾ. ಬಿ.ಕೆ.ಕುಮಾರಸ್ವಾಮಿ, ಜೆ.ಜಿ.ಕಾವೇರಿಯಪ್ಪ, ಎಚ್.ಡಿ.ದೇವಿಕುಮಾರ್, ಎಚ್.ಎಸ್.ಶಶಾಂಕ್, ಗೀತಾ, ಮುರಳೀಧರ್, ಶ್ರೀ ಹರಿಕೃಷ್ಣ, ಡಾ. ಜಿ.ಕೆ.ಗಿರಿಜೇಶ್, ಡಾ. ಬಿ.ಎಂ.ದುಷ್ಯಂತ್‌ಕುಮಾರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಯುವ ಪೀಳಿಗೆಯಲ್ಲಿ ಹೆಚ್ಚಾಗುತ್ತಿದೆ ಕೃಷಿ ಬಗ್ಗೆ ಆಸಕ್ತಿ
  • ಕೃಷಿ ಲಾಭದಾಯಕ ಕ್ಷೇತ್ರ ಎಂಬುದರಲ್ಲಿ ಎರಡು ಮಾತಿಲ್ಲ
  • ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿಕೆ
ಶಿವಮೊಗ್ಗ: ಲಾಭದಾಯಕ ಕ್ಷೇತ್ರವಾಗಿರುವ ಕಾರಣ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ(Young generation)ಯಲ್ಲಿ ಕೃಷಿ ಬಗ್ಗೆ ಆಸಕ್ತಿ ಹೆಚ್ಚಾಗುತ್ತಿದೆ. ಆದರೆ ಶೋಕಿ ಅಥವಾ ಮೋಜು-ಮಸ್ತಿ ಮಾಡುವುದಕ್ಕೆ ಕೃಷಿ ಸೀಮಿತವಾಗಬಾರದು ಎಂದು ರಾಜ್ಯಸಭಾ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.
ನವುಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಆವರಣದಲ್ಲಿ ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸಹಕಾರದಲ್ಲಿ ‘ವಿಜಯವಾಣಿ’(Vijayavani) ಮಾಧ್ಯಮ ಸಹಯೋಗದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳದ ಎರಡನೇ ದಿನವಾದ ಶನಿವಾರ ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೃಷಿ ಲಾಭದಾಯಕ ಕ್ಷೇತ್ರ ಎಂಬುದರಲ್ಲಿ ಎರಡು ಮಾತಿಲ್ಲ. ಕೃಷಿಯನ್ನು ಅವಲಂಬಿಸಿದರೆ ಭವಿಷ್ಯ ಉತ್ತಮವಾಗಿರುತ್ತದೆ. ಆದರೆ ಸಮಸ್ಯೆಗಳು, ಸವಾಲುಗಳು ಹೆಚ್ಚಾದಂತೆ ಕೃಷಿಕರು ಪರಿಹಾರ ಕಂಡುಕೊಳ್ಳುವ ಬದಲು ಸರ್ಕಾರದತ್ತ ಮುಖ ಮಾಡುತ್ತಾರೆ. ಅದರ ಬದಲು ಬೆಳೆಗಳಿಗೆ ರೋಗ ಬರುವುದಕ್ಕೂ ಮುನ್ನವೇ ಎಚ್ಚೆತ್ತು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ಬೆಳೆಯನ್ನು ಕಾಪಾಡಿಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ರೈತರು ಗಮನ ಹರಿಸಬೇಕಿದೆ ಎಂದು ಹೇಳಿದರು.
ಯಾವುದಕ್ಕೇ ದುರ್ಬಿಕ್ಷೆ ಬಂದೋದಗಿದರೂ ಕೃಷಿ ಮಾತ್ರ ದುರ್ಬಿಕ್ಷೆ ಎಂಬುದಿಲ್ಲ. ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಸಮೃದ್ಧ ಕೃಷಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತಿದೆ. ಭತ್ತ, ಕಾಳುಮೆಣಸು, ತೆಂಗು, ಅಡಕೆ ಸೇರಿ ಸಮೃದ್ಧ ಕೃಷಿ ಮಾಡಲಾಗುತ್ತಿದೆ. ಕೃಷಿ ಮಾಡುವುದಕ್ಕೆ ಕೇವಲ ಆಸಕ್ತಿ ಇದ್ದರೆ ಸಾಲದು. ಕಾಲಮಾನಕ್ಕೆ ತಕ್ಕಂತೆ ಪರಿಣಿತಿಯೂ ಬೇಕಾಗುತ್ತದೆ ಎಂದರು.
ಕೃಷಿ ಮತ್ತು ತೋಟಗಾರಿಕೆ ವಿವಿ ಕುಲಪತಿ ಡಾ. ಆರ್.ಸಿ.ಜಗದೀಶ್, ವಿವಿ ವ್ಯವಸ್ಥಾಪನಾ ಮಂಡಳಿ ನಿರ್ದೇಶಕರಾದ ಡಾ. ಬಿ.ಕೆ.ಕುಮಾರಸ್ವಾಮಿ, ಜೆ.ಜಿ.ಕಾವೇರಿಯಪ್ಪ, ಎಚ್.ಡಿ.ದೇವಿಕುಮಾರ್, ಎಚ್.ಎಸ್.ಶಶಾಂಕ್, ಧರ್ಮಸ್ಥಳ ಯೋಜನೆ ಪ್ರಾದೇಶಿಕ ನಿರ್ದೇಶಕರಾದ ಗೀತಾ, ಮುರಳೀಧರ್, ಶ್ರೀ ಹರಿಕೃಷ್ಣ, ಕೃಷಿ ಮತ್ತು ತೋಟಗಾರಿಕೆ ಮೇಳದ ಅಧ್ಯಕ್ಷ ಡಾ. ಜಿ.ಕೆ.ಗಿರಿಜೇಶ್, ಉಪಾಧ್ಯಕ್ಷ ಡಾ. ಬಿ.ಎಂ.ದುಷ್ಯಂತ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net