ಯೋಜನೆ ವಿರೋಧಿ ಹೋರಾಟ ಶೀಘ್ರ ನಿರ್ಧಾರ I more protest

 ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಪ್ರಭುಲಿಂಗ ಕವಳಿಕಟ್ಟಿ ಅವರಿಗೆ ಕೆ.ಎಸ್.ಈಶ್ವರಪ್ಪ ಮನವಿ ಸಲ್ಲಿಸಿದರು. ಬಿ.ನಿಖಿಲ್, ವಿ.ಅಭಿಷೇಕ್, ಕೆ.ಇ.ಕಾಂತೇಶ್, ಅ.ನಾ.ವಿಜಯೇಂದ್ರ, ಜನಾರ್ದನ್ ಪೈ ಇತರರಿದ್ದರು.
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಪ್ರಭುಲಿಂಗ ಕವಳಿಕಟ್ಟಿ ಅವರಿಗೆ ಕೆ.ಎಸ್.ಈಶ್ವರಪ್ಪ ಮನವಿ ಸಲ್ಲಿಸಿದರು. ಬಿ.ನಿಖಿಲ್, ವಿ.ಅಭಿಷೇಕ್, ಕೆ.ಇ.ಕಾಂತೇಶ್, ಅ.ನಾ.ವಿಜಯೇಂದ್ರ, ಜನಾರ್ದನ್ ಪೈ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕೆ.ಎಸ್.ಈಶ್ವರಪ್ಪ ಪುನರುಚ್ಚಾರ
  • ಜಿಲ್ಲಾಡಳಿತಕ್ಕೆ ಮತ್ತೊಮ್ಮೆ ಮನವಿ ಸಲ್ಲಿಕೆ
ಶಿವಮೊಗ್ಗ: ಶರಾವತಿ (sharavati ) ಪಂಪ್ಡ್ ಸ್ಟೋರೇಜ್ (storage) ಯೋಜನೆಯ ವಿರುದ್ಧ ಹಮ್ಮಿಕೊಳ್ಳಲಾಗುವ ಮುಂದಿನ ಹೋರಾಟದ ರೂಪುರೇಷಗಳನ್ನು ಶೀಘ್ರ ನಿರ್ಧರಿಸಲಾಗುವುದು ಎಂದು ಮಾಜಿ ಡಿಸಿಎಂ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ (eeshwarappa) ತಿಳಿಸಿದರು.
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಡಿಸಿ ಪ್ರಭುಲಿಂಗ ಕವಳಿಕಟ್ಟಿ, ಎಸ್ಪಿ ಬಿ.ನಿಖಿಲ್ ಉಪಸ್ಥಿತಿಯಲ್ಲಿ ಬುಧವಾರ ಸಭೆ ನಡೆಸಿದ ಅವರು, ಜಿಲ್ಲಾಧಿಕಾರಿ, ಕೆಪಿಸಿಎಲ್ ಅಧಿಕಾರಿಗಳೊಂದಿಗೆ ಹಲವು ಸಭೆಗಳು ನಡೆದಿದ್ದರೂ ಕೆಪಿಸಿ ಅಧಿಕಾರಿಗಳು ಸ್ಪಂದಿಸದ ಕಾರಣ ಪರಿಸರಕ್ಕಾಗಿ ನಾವು ಮತ್ತು ರಾಷ್ಟ್ರಭಕ್ತರ ಬಳಗದಿಂದ ಮತ್ತೊಮ್ಮೆ ಡಿಸಿ ಅವರೊಂದಿಗೆ ಚರ್ಚಿಸಲಾಗುತ್ತಿದೆ ಎಂದರು.
ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಕಚೇರಿ ಸಿಬ್ಬಂದಿ ಉಮಾಪತಿ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಯೋಜನೆಯ ಸಮಗ್ರ ಮಾಹಿತಿ ಒದಗಿಸುವಂತೆ ಕೇಳಲಾಗಿತ್ತು. ಯೋಜನೆಯ ಯಾವುದೇ ಮಾಹಿತಿ ನೀಡದಂತೆ ಮೇಲಧಿಕಾರಿಗಳ ಆದೇಶವಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದರು.
ಮಾಹಿತಿ ಕೊಡುವಂತೆ ನಾಲ್ಕು ಬಾರಿ ಪತ್ರ ಬರೆದು, ಅಹೋರಾತ್ರಿ ಧರಣಿಯನ್ನೂ ನಡೆಸಲಾಗಿತ್ತು. ಆದರೂ ಕೆಪಿಸಿಯಿಂದ ಮಾಹಿತಿ ಬಂದಿಲ್ಲ. ಹೀಗಾಗಿ ಯೋಜನೆ ವಿರೋಧಿಸಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು. ಯೋಜನೆಗೆ ಸಂಬಂಧಿಸಿ ಕೆಪಿಸಿಎಲ್‌ಗೆ ಹೈಕೋರ್ಟ್ ಛೀಮಾರಿ ಹಾಕಿದೆ ಎಂಬುದು ಗಮನಿಸಬೇಕಾದ ಸಂಗತಿ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಪ್ರಮುಖರಾದ ಶ್ರೀಕಾಂತ್, ಜನಾರ್ದನ್ ಪೈ, ಡಾ. ಶೇಖರ್ ಗೌಳೇರ್, ಅಶೋಕ್‌ಕುಮಾರ್, ಅ.ಮ.ಪ್ರಕಾಶ್, ಅ.ನಾ.ವಿಜಯೇಂದ್ರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net