ಪ್ರಧಾನಿ ಬಳಿ ಕ್ಷಮೆ ಕೇಳಿ ಚರ್ಚೆಗೆ ಇತಿಶ್ರೀ ಹಾಡಲಿ | B.S.Yediyurappa

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Published on

ಪ್ರಮುಖ ಮುಖ್ಯಾಂಶಗಳು

  • ಮಲ್ಲಿಕಾರ್ಜುನ ಖರ್ಗೆ ಅವರು ಕ್ಷಮೆ ಕೇಳಿ ಚರ್ಚೆಗೆ ಕೊನೆ ಹಾಡಬೇಕು
  • ಪ್ರಧಾನಿ ಬಗ್ಗೆ ಅವರ ಹೇಳಿಕೆ ಸರಿಯಲ್ಲ. ಆ ರೀತಿ ಮಾತನಾಡಬಾರದಿತ್ತು
  • ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ(Terrorist) ಎಂದು ಉಲ್ಲೇಖಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕ್ಷಮೆ ಕೇಳಿ ಚರ್ಚೆಗೆ ಕೊನೆ ಹಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(B.S.Yediyurappa) ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರು ದೊಡ್ಡ ಸ್ಥಾನದಲ್ಲಿದ್ದಾರೆ. ಪ್ರಧಾನಿ ಬಗ್ಗೆ ಅವರ ಹೇಳಿಕೆ ಸರಿಯಲ್ಲ. ಆ ರೀತಿ ಮಾತನಾಡಬಾರದಿತ್ತು. ಹಾಗಾಗಿ ತಕ್ಷಣವೇ ಪ್ರಧಾನಿ ಬಳಿ ಕ್ಷಮೆ ಕೇಳಿ ಚರ್ಚೆಗೆ ಇತಿಶ್ರೀ ಹಾಡುವುದು ಒಳ್ಳೆಯದು ಎಂದು ಸಲಹೆ ನೀಡಿದರು.
ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆ(Assembly election)ಯಲ್ಲಿ ಈ ಬಾರಿ ಮತದಾನ ಹೆಚ್ಚಳವಾಗಿದ್ದು, ಬಿಜೆಪಿ ಮೊದಲ ಬಾರಿಗೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಪಶ್ಚಿಮ ಬಂಗಾಳದ ಮತದಾನದಲ್ಲಿ ವೋಟ್ ಶೇರಿಂಗ್(Vote Sharing) ಜಾಸ್ತಿಯಾಗಿರುವುದು ಬಿಜೆಪಿಗೆ ಅನುಕೂಲವಾಗಲಿದೆ. ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಆಡಳಿತ ವಿರೋಧಿ ಅಲೆ ಕಂಡುಬಂದಿದೆ. ಮತದಾನೋತ್ತರ ಸಮೀಕ್ಷೆ ಬಂದ ನಂತರ ಪಕ್ಷದ ಸಾಧನೆ ಗೊತ್ತಾಗಲಿದೆ ಎಂದರು.
ರಾಜ್ಯದ ಉಪ ಚುನಾವಣೆಯಲ್ಲಿ ಎರಡೂ ಕಡೆ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಕಾಂಗ್ರೆಸ್ ವಿರೋಧಿ ಅಲೆ ಜೋರಾಗಿದ್ದು, ಮತದಾರರು ಬಿಜೆಪಿ ಕೈಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net