ಭದ್ರಾವತಿ: ಹಳೇನಗರದ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಮಠದಲ್ಲಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು. ರಾಯರ ವೃಂದಾವನಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಸರದಿಯಲ್ಲಿ ನಿಂತು ದರ್ಶನ ಪಡೆದರು.
ಸಿದ್ದಾರೂಢ ನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿಯೂ ವೃಂದಾವನಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಅಷ್ಟಾವಧಾನ, ಪಂಚಾಮೃತ ಅಭಿಷೇಕ, ಹಸ್ತೋದಕ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿದವು. ಶ್ರೀನಿವಾಸಸ್ವಾಮಿಗೆ ಹಾಗೂ ದುರ್ಗಾದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿತ್ತು.
ಜನ್ನಾಪುರ ಶ್ರೀಮದ್ ಜಯತೀರ್ಥ ಗುರುಸಾರ್ವಭೌಮರ ಮಠದಲ್ಲಿಯೂ 3 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ಜರುಗುತ್ತಿದೆ. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ನಗರದ ವಿವಿಧೆಡೆಯಿಂದ ಸಹಸ್ರಾರು ಭಕ್ತರು ಆಗಮಿಸಿ ರಾಯರ ದರ್ಶನ ಪಡೆದರು.