ಪ್ರತಿಭಟನೆಯಲ್ಲಿ ಮಾತನಾಡಿದ ಯುವ ಮುಖಂಡ ಆನಂದ ಬಾಳ, ಟನೆ ನಡೆದು ಹಲವು ದಿನಗಳಾದರೂ ಆರೋಪಿಯನ್ನು ಬಂಧಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ. ಗ್ರಾಮೀಣ ಭಾಗದ ಬಡ ಹೆಣ್ಣು ಮಗಳೆಂಬ ಕಾರಣಕ್ಕೆ ಈ ಪ್ರಕರಣವನ್ನು ಕಡೆಗಣಿಸಲಾಗುತ್ತಿದೆ. ಪೊಲೀಸ್ ಇಲಾಖೆಯ ಇಚ್ಛಾಶಕ್ತಿ ಕೊರತೆ ಅಥವಾ ರಾಜಕೀಯ ಒತ್ತಡವೇ ಈ ವಿಳಂಬಕ್ಕೆ ಕಾರಣ ಎಂಬ ಅನುಮಾನ ಕಾಡುತ್ತಿದೆ ಎಂದರು.