ಸಾಗರದಲ್ಲಿ ಅಯ್ಯಪ್ಪ ಸ್ವಾಮಿ ದೀಪೋತ್ಸವ | Deepotsava

ಆರ್.ಚಂದ್ರು
ಆರ್.ಚಂದ್ರು
Published on
ಸಾಗರ: ನಗರದಲ್ಲಿ ಅಯ್ಯಪ್ಪಸ್ವಾಮಿ ಲಕ್ಷ ದೀಪೋತ್ಸವ ಅಂಗವಾಗಿ ಡಿ.25ರಿಂದ 27ರವರೆಗೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಯ್ಯಪ್ಪಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಆರ್.ಚಂದ್ರು ಮಾಹಿತಿ ನೀಡಿದರು
25ರಂದು ಬೆಳಗ್ಗೆ 8 ಗಂಟೆಗೆ ಪಿ.ಆರ್.ರವೀಂದ್ರನ್ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಿದ್ದಾರೆ. ಸಂಜೆ 5.30ಕ್ಕೆ ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ನಡೆಯುವ ಮಾಲಾಧಾರಿಗಳ ರಾಜಬೀದಿ ಮೆರವಣಿಗೆಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಚಾಲನೆ ನೀಡುವರು. ರಾಜು ಗುರುಸ್ವಾಮಿ ನೇತೃತ್ವ ವಹಿಸುವರು. ಸಂಜೆ 6ಕ್ಕೆ ಆನಂದಪುರ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ದೀಪೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮಹಾಗಣಪತಿ ದೇವಸ್ಥಾನ ಸಮಿತಿ ಅಧ್ಯಕ್ಷ ಟಿ.ವಿ.ಪಾಂಡುರಂಗ ಉಪಸ್ಥಿತರಿರುವರು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
26ರಂದು ಸಂಜೆ 5ಕ್ಕೆ ಅಯ್ಯಪ್ಪಸ್ವಾಮಿ ದೇವಾಲಯ ನವ ನಿರ್ಮಾಣ ಕಾರ್ಯಯೋಜನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಗೋಪಾಲಕೃಷ್ಣ ಬೇಳೂರು, ಎಂಎಲ್‌ಸಿ ಡಾ. ಧನಂಜಯ ಸರ್ಜಿ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮೋಹನ್ ಆಳ್ವ, ಡಿಸಿ ಗುರುದತ್ತ ಹೆಗಡೆ ಭಾಗವಹಿಸುವರು. ಸಂಜೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಸಿಕೊಡುವರು ಎಂದರು.
27ರಂದು ಬೆಳಗ್ಗೆ 8ಕ್ಕೆ ಗಣಹೋಮ ನೆರವೇರಲಿದೆ. ಬೆಳಗ್ಗೆ 10ರಿಂದ ಆರೋಗ್ಯ ಉಚಿತ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ. ಮಾಜಿ ಸಚಿವ ಹರತಾಳು ಹಾಲಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಮಧ್ಯಾಹ್ನ 12ಕ್ಕೆ ಅನ್ನ ಸಂತರ್ಪಣೆಗೆ ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ. ಎಸ್.ರಾಮಪ್ಪ ಚಾಲನೆ ನೀಡುವರು ಎಂದು ಹೇಳಿದರು. ರಾಜು ಗುರುಸ್ವಾಮಿ, ಸುನೀಲ್ಕುಮಾರ್, ಪ್ರಸಾದ್, ಜಿನೇಶ್, ಸಿಬಿನ್ ಸೋಮನ್, ಮನೋಜ್, ಮೌನೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net