ಬಾಬು ಜಗಜೀವನರಾಮ್ ಶೋಷಿತರ ಧ್ವನಿ | Jagjivanram birthday

ಭದ್ರಾವತಿಯಲ್ಲಿ ಆಯೋಜಿಸಿದ್ದ ಡಾ. ಬಾಬು ಜಗಜೀವನರಾಮ್ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾ ರಾಜಕುಮಾರ್ ಉದ್ಘಾಟಿಸಿದರು. ಬಿ.ಎಸ್.ಗಣೇಶ್, ಚನ್ನಪ್ಪ, ಬಿ.ಕೆ.ಮೋಹನ್ ಇತರರಿದ್ದರು.
ಭದ್ರಾವತಿಯಲ್ಲಿ ಆಯೋಜಿಸಿದ್ದ ಡಾ. ಬಾಬು ಜಗಜೀವನರಾಮ್ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾ ರಾಜಕುಮಾರ್ ಉದ್ಘಾಟಿಸಿದರು. ಬಿ.ಎಸ್.ಗಣೇಶ್, ಚನ್ನಪ್ಪ, ಬಿ.ಕೆ.ಮೋಹನ್ ಇತರರಿದ್ದರು.
Published on
ಭದ್ರಾವತಿ: ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ಅವರು ಕೇವಲ ಅಸ್ಪಶ್ಯರು, ದಲಿತರಿಗಾಗಿ ಹೋರಾಟ ನಡೆಸಲಿಲ್ಲ. ದೇಶದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಮಹಾನ್ ನಾಯಕ ಎಂದು ಉಪನ್ಯಾಸಕ ಡಾ. ಕೆ.ಎಚ್.ಕುಮಾರಸ್ವಾಮಿ ಹೇಳಿದರು.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಭಾನುವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಡಾ. ಬಾಬು ಜಗಜೀವನರಾಮ್ ಜಯಂತ್ಯುತ್ಸವದಲ್ಲಿ ಉಪನ್ಯಾಸ ನೀಡಿದರು.
ಜಗಜೀವನರಾಮ್ ಅವರು ದೇಶದ ಎಲ್ಲ ಸಮುದಾಯಗಳ ದೀನದಲಿತರು, ಶೋಷಿತರು, ಅಸ್ಪಶ್ಯರು ಸೇರಿ ಎಲ್ಲರ ಏಳಿಗೆಗಾಗಿ ಯೋಜನೆಗಳನ್ನು ರೂಪಿಸಿದರು. ಸ್ವಾತಂತ್ರಾೃನಂತರ ದೇಶದಲ್ಲಿ ಉಂಟಾದ ಆಹಾರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿದರು. ಹಲವಾರು ನೀರಾವರಿ ಯೋಜನೆಗಳನ್ನು ರೂಪಿಸಿದರು ಎಂದರು.
ದೇಶದ ಗಡಿಗಳನ್ನು ಭದ್ರಗೊಳಿಸಿದರು. ತಮ್ಮ ಸುದೀರ್ಘ ರಾಜಕೀಯದಲ್ಲಿ ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ರೂಪಿಸುವ ಮೂಲಕ ಇಂದಿಗೂ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ ಎಂದು ತಿಳಿಸಿದರು.
ಬಿ.ಎಚ್.ರಸ್ತೆ ಅಂಬೇಡ್ಕರ್ ವೃತ್ತದಿಂದ ಬಾಬು ಜಗಜೀವನರಾಮ್ ಅವರ ಭಾವಚಿತ್ರವನ್ನು ತಾಲೂಕು ಪಂಚಾಯಿತಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು.
ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾ ರಾಜಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ತಹಸೀಲ್ದಾರ್ ಪರುಸಪ್ಪ ಕುರುಬರ, ತಾಪಂ ಇಒ ಎಂ.ಆಶಾಲತಾ, ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್.ಗಣೇಶ್, ನಗರಸಭೆ ಪೌರಾಯುಕ್ತ ಕೆ.ಎನ್.ಹೇಮಂತ್, ಸದಸ್ಯರಾದ ಚನ್ನಪ್ಪ, ಬಿ.ಕೆ.ಮೋಹನ್, ಮುಖಂಡರಾದ ಶಿವಬಸಪ್ಪ, ಬಿ.ಎ.ಮಂಜುನಾಥ್, ವಿ.ವಿನೋದ್, ಎಂ.ಶಿವಕುಮಾರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net