ಹೊಸನಗರದಲ್ಲಿ ಈಡಿಗರ ಸಮಾಜದ ಬಾಲಕಿಯರ ವಸತಿ ನಿಲಯಕ್ಕೆ ಕಾಗೋಡು ತಿಮ್ಮಪ್ಪ, ಮಧು ಬಂಗಾರಪ್ಪ, ಗೋಪಾಲಕೃಷ್ಣ ಬೇಳೂರು ಗುದ್ದಲಿಪೂಜೆ ನೆರವೇರಿಸಿದರು. ಬಂಡಿ ರಾಮಚಂದ್ರಪ್ಪ, ಡಾ. ಜಿ.ಡಿ.ನಾರಾಯಣಪ್ಪ, ಕಲಗೋಡು ರತ್ನಾಕರ್ ಇತರರಿದ್ದರು.
Published on:
Copied
Follow Us
ಹೊಸನಗರ: ರಾಜ್ಯದಲ್ಲಿ ಈಡಿಗರ ಸಮಾಜದ ಶ್ರೇಯೋಭಿವರದ್ಧಿಗೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕೊಡುಗೆ ಅಪಾರ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಹೊಸನಗರ ತಾಲೂಕು ಆರ್ಯ ಈಡಿಗರ ಸಂಘ, ದೀವರ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಆರ್ಯ ಈಡಿಗರ ಸಂಘದ ನೂತನ ಸಮುದಾಯ ಭವನ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿ, ಈಡಿಗ ಸಮಾಜಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರು ಸಮಾಜದ ಪರ ಹೋರಾಟ ಮಾಡಿದ ಲವಾಗಿ ನಮಗೆ ಅನುಕೂಲವಾಗುತ್ತಿದೆ ಎಂದು ತಿಳಿಸಿದರು.
ಬಾಲಕಿಯರ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಸಮಾಜದ ಹಿತದೃಷ್ಟಿಯಲ್ಲಿ ಪಕ್ಷಾತೀತವಾಗಿ ಒಂದಾಗಬೇಕು. ಎಲ್ಲರೂ ಸಂಘಟನೆಯಿಂದ ಬಲಯುತವಾಗಬೇಕು. ಸಮಾಜದ ವಿಷಯದಲ್ಲಿ ಒಟ್ಟಾಗಿ ಸಾಗೋಣ ಎಂದು ಸಲಹೆ ನೀಡಿದರು.
ಜಿಲ್ಲೆಯ ಎಲ್ಲ ಸಮಾಜದ ಒಳಿತಿಗಾಗಿ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಿದ್ದೇನೆ. ಸಮಾಜದ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣಕ್ಕೆ ಒಂದು ಕೋಟಿ ರೂ. ಅನುದಾನ ಕೊಡುತ್ತೇನೆ ಎಂದು ತಿಳಿಸಿದರು.
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಗರ್ತಿಕೆರೆ ನಿಟ್ಟೂರು ನಾರಾಯಣಗುರು ಸಂಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.
ಆರ್ಯ ಈಡಿಗರ ಸಂಘದ ಅಧ್ಯಕ್ಷ ಬಂಡಿ ರಾಮಚಂದ್ರಪ್ಪ, ಮಾಜಿ ಶಾಸಕ ಡಾ. ಜಿ.ಡಿ.ನಾರಾಯಣಪ್ಪ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ, ಪ್ರಮುಖರಾದ ಎರಗಿ ಉಮೇಶ್, ಕಲಗೋಡು ರತ್ನಾಕರ್, ಸುರೇಶ್ ಸ್ವಾಮಿರಾವ್, ಪುಟ್ಟಸ್ವಾಮಿ, ಮುರಳೀಧರ, ಎಂ.ಪಿ.ಸುರೇಶ್, ಹುಲಿಗಾರು ಕೃಷ್ಣಮೂರ್ತಿ ಇತರರಿದ್ದರು.
ಸಮಸ್ಯೆ ಇನ್ನೂ ಮುಗಿದಿಲ್ಲ
ರಾಜ್ಯದಲ್ಲಿ ರೈತರ ಬಗರ್ ಸಮಸ್ಯೆ ದಿನೇದಿನೆ ಜಟಿಲವಾಗುತ್ತಿದೆ. ಬಡ ರೈತರ ಮೇಲೆ ಅರಣ್ಯ ಅಧಿಕಾರಿಗಳು ಕಾನೂನು ಸಮರ ಸಾರಿದ್ದಾರೆ. ಕೆಲವೆಡೆ ದೌರ್ಜನ್ಯ ನಡೆಯುತ್ತಿದೆ. ತಿಂಗಳೊಳಗೆ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲಿದ್ದಾರೆ. ಶಾಸಕ ಮತ್ತು ಸಚಿವರು ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದ ಗಮನ ಸೆಳೆಯಬೇಕು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದರು.
ಹಿರಿಯ ನಾಯಕರು ತೋರಿಸಿದ ಮಾರ್ಗದಲ್ಲಿ ನಾವು ಮುನ್ನಡೆಯಬೇಕು. ಸಮಾಜದ ವಿದ್ಯಾರ್ಥಿಗಳು ಹೆಚ್ಚಿನ ವ್ಯಾಸಂಗ ಮಾಡಿ ಸ್ವಾಭಿಮಾನಿಗಳಾಗಬೇಕು. ಬಾಲಕಿಯರ ವಿದ್ಯಾರ್ಥಿ ನಿಲಯ ಶೀಘ್ರ ನಿರ್ಮಾಣ ಆಗಬೇಕು. ಕುಟುಂಬದ ಪರವಾಗಿ 25ಲಕ್ಷ ರೂ. ಹಣ ನೀಡುತ್ತೇನೆ.