ಅಲ್ಲದೆ, ಓಡಿ ಖಾತೆಯಲ್ಲಿದ್ದ 3,89,554 ರೂ.ಗೆ 2025ರ ಫೆ.18ರಿಂದ ಅನ್ವಯವಾಗುವಂತೆ ವಾರ್ಷಿಕ ಶೇ. 9ರ ಬಡ್ಡಿ ಸೇರಿಸಿ ಪೂರ್ಣ ಹಣ ಪಾವತಿಸಬೇಕು. ಮಾನಸಿಕ ವೇದನೆಗೆ ಪರಿಹಾರವಾಗಿ ಒಂದು ಲಕ್ಷ ರೂ. ಮತ್ತು ದೂರಿನ ಖರ್ಚು ವೆಚ್ಚಕ್ಕಾಗಿ 10 ಸಾವಿರ ರೂ. ಅನ್ನು ಆದೇಶವಾದ 45 ದಿನಗಳೊಳಗಾಗಿ ಪಾವತಿಸಬೇಕು. ತಪ್ಪಿದ್ದಲ್ಲಿ ವಾರ್ಷಿಕ ಶೇ. 12ರ ಬಡ್ಡಿಯನ್ನು ಸೇರಿಸಿ ಪೂರ್ಣ ಹಣ ಪಾವತಿಸುವವರೆಗೆ ನೀಡುವಂತೆ ಬ್ಯಾಂಕ್‌ಗೆ ಪೀಠ ಆದೇಶಿಸಿದೆ ಎಂದು ಆಯೋಗದ ಸಹಾಯಕ ರಿಜಿಸ್ಟ್ರಾರ್ ಎಂ.ಟಿ.ಗಂಗಾಧರ ನಾಯ್ಕ್ ತಿಳಿಸಿದ್ದಾರೆ.