ಶಿರಾಳಕೊಪ್ಪ ಸಮೀಪ ಜಾವಗಟ್ಟಿ ಗ್ರಾಮದಲ್ಲಿ ಶ್ರೀ ಗಾಳಿ ದುರ್ಗಮ್ಮ ದೇವಿಯ ದೇವಸ್ಥಾನ ಉದ್ಘಾಟನೆ ಪ್ರಯುಕ್ತ ಆಯೋಜಿಸಿದ್ದ ಧರ್ಮಸಭೆಯನ್ನು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು. ಶ್ರೀ ಚನ್ನವೀರ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಮಹಾಂತ ದೇಶಿಕೇಂದ್ರ ಸ್ವಾಮೀಜಿ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅನಿಸಿಕೆ
ಜಾವಗಟ್ಟಿ ಗ್ರಾಮದಲ್ಲಿ ಶ್ರೀ ಗಾಳಿ ದುರ್ಗಮ್ಮ ದೇವಾಲಯ ಉದ್ಘಾಟನೆ
ಶಿರಾಳಕೊಪ್ಪ: ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸುವ ಉದ್ದೇಶದಿಂದಲೇ 12ನೇ ಶತಮಾನದಲ್ಲಿ ಬಸವಣ್ಣ ಅವರು ಅನುಭವ ಮಂಟಪದಲ್ಲಿ ಶಿವಶರಣೆ ಅಕ್ಕಮಹಾದೇವಿಗೆ ಅವಕಾಶ ನೀಡಿ ಜಗತ್ತಿಗೆ ಮಹತ್ವದ ಸಂದೇಶ ಸಾರಿದ್ದರು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ಜಾವಗಟ್ಟಿ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಗಾಳಿ ದುರ್ಗಮ್ಮ ದೇವಿಯ ನೂತನ ದೇವಸ್ಥಾನ ಉದ್ಘಾಟನೆಯ ಧರ್ಮ ಸಮಾರಂಭದಲ್ಲಿ ಮಾತನಾಡಿ, ದೇವಸ್ಥಾನಗಳು ಊರಿಗೆ ಚೈತನ್ಯ ನೀಡುವ ಶಕ್ತಿ ಹೊಂದಿವೆ ಎಂದು ತಿಳಿಸಿದರು.
ಐದು ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನದ ಪಕ್ಕದಲ್ಲಿ ಸಾಗುವ ರಸ್ತೆ ನಿರ್ಮಿಸಲಾಗಿದ್ದು, ಜಾವಗಟ್ಟಿ ಗ್ರಾಮದ ಶ್ರೀ ವೀರಾಂಜನೇಯ ಹಾಗೂ ಸಿದ್ದರಾಮಯ್ಯ ದೇವಸ್ಥಾನಗಳಿಗೂ ಸಹ ಅನುದಾನ ನೀಡಲಾಗಿದೆ. ಗಾಳಿ ದುರ್ಗಮ್ಮ ದೇವಸ್ಥಾನಕ್ಕೆ 8 ಲಕ್ಷ ರೂ. ಮಂಜೂರಾಗಿದ್ದು, ಈವರೆಗೆ 4 ಲಕ್ಷ ರೂ. ಮಾತ್ರ ಬಿಡುಗಡೆಯಾಗಿದೆ. ಉಳಿದ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ನಾಗರಾಜ ಗೌಡ ಮಾತನಾಡಿ, ದೇವಸ್ಥಾನಕ್ಕೆ ಬಾಕಿ ಇರುವ ಅನುದಾನವನ್ನು ಸರ್ಕಾರದಿಂದ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.
ತೊಗರ್ಸಿ ಶ್ರೀ ಚನ್ನವೀರ ದೇಶಿಕೇಂದ್ರ ಸ್ವಾಮೀಜಿ ಹಾಗೂ ಶಿಕಾರಿಪುರ ವಿರಕ್ತಮಠದ ಸ್ವಾಮೀಜಿ ಆಶೀರ್ವಚನ ನೀಡಿದರು. ದೇವಸ್ಥಾನ ಸಮಿತಿ ಅಧ್ಯಕ್ಷ ಶಿವಪ್ಪ ಯಾಬೇರ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಮಳೆ ಹಿರೇಮಠದ ಶ್ರೀ ಮಹಾಂತ ದೇಶಿಕೇಂದ್ರ ಸ್ವಾಮೀಜಿ, ಹಿರೇಮಾಗಡಿ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ, ಶಿವಳ್ಳಿಯ ಹನುಮಂತಪ್ಪ ಗುರು, ಭೋವಿ ಸಮಾಜದ ತಾಲೂಕು ಗೌರವಾಧ್ಯಕ್ಷ ಸಣ್ಣಹನುಮಂತಪ್ಪ, ಅಧ್ಯಕ್ಷ ಈಶ್ವರಪ್ಪ, ಬಗರ್‌ಹುಕುಂ ಸಮಿತಿ ಸದಸ್ಯ ಸುನೀಲ್ ತಾಳಗುಂದ ಇತರರಿದ್ದರು.