ಪಿಂಚಣಿ ಯೋಜನೆಯಿಂದ ಅನುಕೂಲ

Distribution of Sanction Letters
ಭದ್ರಾವತಿಯಲ್ಲಿ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಮರು ಮಂಜೂರಾತಿ ಆದೇಶ ಪತ್ರಗಳನ್ನು ಶಾಸಕ ಬಿ.ಕೆ.ಸಂಗಮೇಶ್ವರ್ ವಿತರಿಸಿದರು. ಗೀತಾ ರಾಜಕುಮಾರ್, ಹೇಮಂತ್, ಪ್ರದೀಪ್ ದೇವಗಿರಿ, ಬಿ.ಎಸ್.ಗಣೇಶ್ ಇತರರಿದ್ದರು.
Published on: 

ಭದ್ರಾವತಿ: ಕಾಂಗ್ರೆಸ್ ಸರ್ಕಾರ ವೃದ್ಧರಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದ ಬಡವರು, ದಲಿತರು ಸೇರಿ ಎಲ್ಲ ವರ್ಗದ ಜನರಿಗೂ ಅನುಕೂಲವಾಗುತ್ತಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.

ನಗರದಲ್ಲಿ ಆಯೋಜಿಸಿದ್ದ ಸಾಮಾಜಿಕ ಭದ್ರತಾ ಯೋಜನೆಯಡಿ ದೊರೆಯುವ ವೃದ್ಧಾಪ್ಯ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಮತ್ತಿತರ ಪಿಂಚಣಿ ಸೌಲಭ್ಯಗಳ ಮರು ಮಂಜೂರಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿಂದಿನ ನಾಯಕರು ವೃದ್ಧಾಪ್ಯ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆಗಳನ್ನು ಮುಂದುವರಿಸಿಕೊಂಡು ಬರಲಾಗುತ್ತಿದೆ. ಅರ್ಹರನ್ನು ಗುರುತಿಸಿ ಮಂಜೂರಾತಿ ಪತ್ರ ಸಿದ್ಧಪಡಿಸುವಲ್ಲಿ ಅಧಿಕಾರಿಗಳ ಶ್ರಮ ಶ್ಞಾಘನೀಯ ಎಂದರು.

ಕ್ಷೇತ್ರದಲ್ಲಿ ನನ್ನನ್ನು 4 ಬಾರಿ ಶಾಸಕರನ್ನಾಗಿ ಆಯ್ಕೆ ಮಾಡಿದ್ದೀರಿ. ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ‘ನಿಮಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರ ಬೇಡ. ಮುಂದಿನ ಚುನಾವಣೆಯಲ್ಲಿ ನಿಮ್ಮ ಮಗ ಬಿ.ಎಸ್.ಗಣೇಶ್ ಅವರನ್ನು ಗೆಲ್ಲಿಸಿಕೊಂಡು ಬನ್ನಿ. ಮೊದಲ ಅವಧಿಯಲ್ಲೇ ಅವರಿಗೆ ಮಂತ್ರಿಗಿರಿ ಕೊಡುತ್ತೇವೆ’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತು ಕೊಟ್ಟಿದ್ದಾರೆ. ಹಾಗಾಗಿ ನನ್ನ ಮಗ ಗಣೇಶ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ವಿವಿಧ ಯೋಜನೆಗಳಡಿ ಸಾವಿರಾರು ಲಾನುಭವಿಗಳಿಗೆ ಮರು ಮಂಜೂರಾತಿ ಆದೇಶ ಪತ್ರ ವಿತರಿಸಲಾಯಿತು. ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಬಿ.ಎಸ್.ಗಣೇಶ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸದಸ್ಯ ಬಿ.ಕೆ.ಮೋಹನ್, ಪೌರಾಯುಕ್ತ ಕೆ.ಎನ್.ಹೇಮಂತ್, ತಹಸೀಲ್ದಾರ್ ಪ್ರದೀಪ್ ದೇವಗಿರಿ, ತಾಪಂ ಇಒ ಎಂ.ಆಶಾಲತಾ, ಚನ್ನಪ್ಪ, ಕದಿರೇಶ್, ಬಿ.ಟಿ.ನಾಗರಾಜ್, ಮಣಿ, ರೇಣುಕಮ್ಮ, ಜೆಬಿಟಿ ಬಾಬು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net