ಸವಳಂಗ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಶಿವಮೊಗ್ಗ: ತಾಲೂಕಿನ ಕೊಮ್ಮನಾಳು ಕ್ರಾಸ್(Kommanalu Cross) ಬಳಿ ಭಾನುವಾರ ರಾತ್ರಿ ಖಾಸಗಿ ಬಸ್ ಡಿಕ್ಕಿ(Bus Accident)ಯಾಗಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ದಾವಣಗೆರೆಯ ನ್ಯಾಮತಿ ತಾಲೂಕಿನ ಹಳೇಜೋಗ(Old joga)ದ ಶಿವಕುಮಾರ್ (32) ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ. ಶಿವಮೊಗ್ಗದಿಂದ ಹಳೇಜೋಗದ ತಮ್ಮ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಶಿವಕುಮಾರ್ ಅವರಿಗೆ ಸವಳಂಗ(Savalanga) ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.
ಇದರಿಂದ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.