ಬಿಜೆಪಿ ಸಂಸದರು ಆಟಕ್ಕುಂಟು ಲೆಕ್ಕಕ್ಕೆ ಇಲ್ಲ । DCM D.K.Sivakumar

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
Published on

ಪ್ರಮುಖ ಮುಖ್ಯಾಂಶಗಳು

  • ಕೇಂದ್ರದಿಂದ ಬಜೆಟ್ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ
  • ಧ್ವನಿ ಎತ್ತದ ಬಿಜೆಪಿ ಯಾರೋಬ್ಬ ಸಂಸದರು ಮತ್ತು ರಾಜ್ಯದ ಕೇಂದ್ರ ಸಚಿವರು
  • ಬಿಜೆಪಿ ಸಂಸದರ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿ
ಶಿವಮೊಗ್ಗ: ಕೇಂದ್ರ ಸರ್ಕಾರದಿಂದ ಬಜೆಟ್(Budget) ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ತೋರುತ್ತಿದ್ದು, ಬಿಜೆಪಿ ಸಂಸದರು ಮತ್ತು ರಾಜ್ಯದ ಕೇಂದ್ರ ಸಚಿವರು ಯಾರೋಬ್ಬರೂ ಈ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(D.K.Sivakumar) ಕಿಡಿಕಾರಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆ(Upper River Project)ಗೆ 5,300 ಕೋಟಿ ರೂ. ಕೊಡುತ್ತೇನೆಂದು ಘೋಷಿಸಿದ್ದರು. ಆದರೆ ಇದುವರೆಗೆ ನಯಾ ಪೈಸೆ ಬಿಡುಗಡೆ ಮಾಡಿಲ್ಲ ಎಂದು ತಿವಿದರು.
ಬಿಜೆಪಿಯವರ ಹಗರಣಗಳನ್ನು ನಾವು ಸಾಕಷ್ಟು ಬಿಚ್ಚಿದ್ದೇವೆ. ಕರೊನಾ(carona) ಸೇರಿದಂತೆ ಹಿಂದೆ ಅವರ ಮೇಲೆ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡುತ್ತೇವೆ. ಅವರು ಪ್ರತಿಯೊಂದು ವಿಚಾರಕ್ಕೂ ರಾಜಕೀಯ ಮಾಡುತ್ತಿದ್ದಾರೆ. ರಾಜಕೀಯ ಮಾಡುವುದಕ್ಕೆ ಅವರಿಗೆ ಯಾವುದೋ ಒಂದು ವಿಷಯ ಬೇಕಾಗಿದೆ ಅಷ್ಟೆ ಎಂದರು. 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಮನರೇಗಾ(Manarega) ವಿಚಾರವಾಗಿ ಪ್ರಸ್ತಾಪ ಮಾಡಿದ್ದು, ಇದನ್ನು ಕಾರ್ಯಕಲಾಪ ಸಲಹಾ ಸಮಿತಿ ಮುಂದಿಟ್ಟು ತೀರ್ಮಾನ ಮಾಡಬೇಕು ಎಂದು ಸಭಾಧ್ಯಕ್ಷರು ತಿಳಿಸಿದ್ದರು. ಅದರಂತೆ ಗುರುವಾರ ಇದರ ಬಗ್ಗೆ ಚರ್ಚೆಯಾಗಿದೆ. ವಿಬಿಜಿ ರಾಮ್ ಜಿ ಕಾಯ್ದೆಯನ್ನು ಏಕೆ ರದ್ದು ಮಾಡಬೇಕು ಎಂದು ನಾವು ತಿಳಿಸುತ್ತೇವೆ. ಏಕೆಂದರೆ ಈಗಿರುವ ಪರಿಸ್ಥಿತಿಯಲ್ಲಿ ಯಾವ ರಾಜ್ಯದಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದರು.
ಈಗ ನಾಲ್ಕೈದು ತಿಂಗಳು ವ್ಯವಸಾಯದ ಕಾಲ. ಈ ಸಮಯದಲ್ಲಿ ರೈತರು(Farmers) ಅವರವರ ಕೂಲಿಯನ್ನು ಅವರು ಪಡೆದುಕೊಳ್ಳುತ್ತಿದ್ದರು. ಇಂತಹ ಸಮಯದಲ್ಲೇ ನರೇಗಾ ಯೋಜನೆ ತೆಗೆದು ಹಾಕಿದರೆ ಯಾರಿಗೂ ಏನೂ ಅನುಕೂಲವಾಗುವುದಿಲ್ಲ. ಮಾನವ ದಿನಗಳನ್ನು 125 ದಿನಗಳಿಗೆ ಹೆಚ್ಚಳ ಮಾಡಿದ್ದೇವೆಂದು ಹೇಳಬಹುದು. ಆದರೆ ಬೇರೆ ಸಮಯದಲ್ಲಿ ಇಷ್ಟು ದಿನಗಳ ಕಾಲ ಕೆಲಸ ನೀಡಲು ಸಾಧ್ಯವಿಲ್ಲ. ಒಂದೊಂದು ಪಂಚಾಯತಿಗೆ ತಲಾ 1ರಿಂದ 1.5 ಕೋಟಿ ರೂ. ಅನುದಾನ ನಷ್ಟವಾಗುತ್ತಿದೆ. ಜಾಬ್ ಕಾರ್ಡ್ ಹೊಂದಿರುವವರಿಗೂ ನಷ್ಟ ಎಂದರು.
ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಸದ್ಯಕ್ಕೆ ಸರ್ಕಾರದಿಂದ ಪರಿಹಾರ ಇಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net