ಷಡ್ಯಂತ್ರದಿಂದ ಬಿಜೆಪಿಗೆ ಗೆಲುವು | Meet the Press

ಸಾಗರ ಪ್ರವಾಸಿ ಮಂದಿರದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ಪ್ರಾಂತ್ಯ ಆರ್ಯ ಈಡಿಗರ ಸಂಘದ ಪ್ರಮುಖರು ಅನುದಾನ ಕೋರಿ ಮನವಿ ಸಲ್ಲಿಸಿದರು. ತಾರಾಮೂರ್ತಿ, ಗಿರೀಶ್ ಕೋವಿ, ಮಹಾಬಲ ಕೌತಿ, ಕಿರಣ್, ತುಕಾರಾಂ ಇತರರಿದ್ದರು.
ಸಾಗರ ಪ್ರವಾಸಿ ಮಂದಿರದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ಪ್ರಾಂತ್ಯ ಆರ್ಯ ಈಡಿಗರ ಸಂಘದ ಪ್ರಮುಖರು ಅನುದಾನ ಕೋರಿ ಮನವಿ ಸಲ್ಲಿಸಿದರು. ತಾರಾಮೂರ್ತಿ, ಗಿರೀಶ್ ಕೋವಿ, ಮಹಾಬಲ ಕೌತಿ, ಕಿರಣ್, ತುಕಾರಾಂ ಇತರರಿದ್ದರು.
Published on
ಸಾಗರ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ ಆಗಿಲ್ಲ. ಕೇರಳ ಗೆದ್ದಿದ್ದೇವೆ. ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಸಹಕಾರ ನೀಡಿದ್ದೇವೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.
ಭಾನುವಾರ ಖಾಸಗಿ ಕಾರ್ಯಕ್ರಮ ನಿಮಿತ್ತ ಸಾಗರಕ್ಕೆ ಆಗಮಿಸಿದ್ದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಪಕ್ಷಕ್ಕೆ ಹಿನ್ನಡೆ ಆಗಿರಬಹುದು. ಆದರೆ ಷಡ್ಯಂತ್ರದಿಂದ ಬಿಜೆಪಿ ಜಯಗಳಿಸಿದೆ. ನೈಜ ಚುನಾವಣೆ ಪ್ರಕ್ರಿಯೆಯಿಂದ ಬಿಜೆಪಿ ಗೆದ್ದಿಲ್ಲ. 93 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. 27 ಲಕ್ಷ ಮತದಾರರಿಗೆ ಐದು ವರ್ಷದ ನಂತರ ಮತ ಚಲಾಯಿಸಿ, ಈ ಬಾರಿ ಮತದಾನ ಮಾಡಬೇಡಿ ಎಂದು ಮತ ಚಲಾವಣೆಗೆ ಅವಕಾಶ ನೀಡಿಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿರುದ್ಧ ಬಿಜೆಪಿ ಗೆಲುವು ದಾಖಲಿಸಿದೆ ಎಂದು ದೂರಿದರು.
ಚುನಾವಣೆಯಲ್ಲಿ ಸರ್ಕಾರದ ಎಲ್ಲ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಒಂದು ರೀತಿ ಯುದ್ಧಭೂಮಿ ಮಾಡಿಕೊಂಡು ಚುನಾವಣೆ ನಡೆಸಲಾಗಿದೆ. ಪೊಲೀಸ್ ಬಲ ಬಳಸಿಕೊಂಡು ಪಶ್ಚಿಮಬಂಗಾಳದಲ್ಲಿ ಗೆದ್ದರೆ, ಅಸ್ಸಾಂನಲ್ಲಿ ಅವರಿಗೆ ಅನುಕೂಲವಾಗುವಂತೆ ಕ್ಷೇತ್ರ ಮರು ವಿಂಗಡಣೆ ಮಾಡಿಕೊಂಡು ಗೆಲುವು ದಾಖಲಿಸಿದ್ದಾರೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದೆ. ಅದರ ಬಗ್ಗೆ ನಾವು ಮಾತನಾಡಿದರೆ ಪಕ್ಷ ವಿರೋಧಿ ಚಟುವಟಿಕೆಯಾಗುತ್ತದೆ. ಬದಲಾವಣೆ ಮಾಡಬೇಕೋ ಅಥವಾ ಬೇಡವೋ ಎಂಬ ಬಗ್ಗೆ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಿರ್ಧರಿಸುತ್ತಾರೆ. ಹೈಕಮಾಂಡ್ ಹೇಳಿದ ರೀತಿ ನಾವು ನಡೆದುಕೊಳ್ಳುತ್ತೇವೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಪ್ರಮುಖರಾದ ತಾರಾಮೂರ್ತಿ, ಗಿರೀಶ್ ಕೋವಿ, ಮಹಾಬಲ ಕೌತಿ, ಅನಿತಾಕುಮಾರಿ, ಕಿರಣ್ ದೊಡ್ಮನೆ, ತುಕಾರಾಂ, ಮಂಜಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net