ಬಿಜೆಪಿಯಿಂದ ದಲಿತ ವಿರೋಧಿ ನಡೆ | congress protest

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಮಾಡಿದ್ದನ್ನು ಖಂಡಿಸಿ ಸಾಗರದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಮುಖರು ಪ್ರತಿಭಟನೆ ನಡೆಸಿದರು. ಬಿ.ಆರ್.ಜಯಂತ್, ಎನ್.ಲಲಿತಮ್ಮ, ಎಲ್.ಚಂದ್ರಪ್ಪ, ಪ್ರಭಾವತಿ, ಕಲಸೆ ಚಂದ್ರಪ್ಪ ಇತರರಿದ್ದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಮಾಡಿದ್ದನ್ನು ಖಂಡಿಸಿ ಸಾಗರದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಮುಖರು ಪ್ರತಿಭಟನೆ ನಡೆಸಿದರು. ಬಿ.ಆರ್.ಜಯಂತ್, ಎನ್.ಲಲಿತಮ್ಮ, ಎಲ್.ಚಂದ್ರಪ್ಪ, ಪ್ರಭಾವತಿ, ಕಲಸೆ ಚಂದ್ರಪ್ಪ ಇತರರಿದ್ದರು.
Published on
ಸಾಗರ: ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿದ್ದನ್ನು ಬ್ಲಾಕ್ ಕಾಂಗ್ರೆಸ್ ಪ್ರಮುಖರು ಉಪವಿಭಾಗಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಬಿಜೆಪಿ ಮತ್ತು ಅಂಗ ಸಂಸ್ಥೆಗಳಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ. ಬಿಜೆಪಿಯವರಿಗೆ ಮುಸ್ಲಿಮರು ಮಾತ್ರವಲ್ಲದೆ, ದಲಿತರು ಸಹ ವಿರೋಧಿಗಳು ಎನ್ನುವುದು ಅನೇಕ ಸಂದರ್ಭದಲ್ಲಿ ಸಾಬೀತಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲದವರು ದೇಶವನ್ನು ಮುನ್ನಡೆಸುತ್ತಿದ್ದಾರೆ. ಹಿಂದುತ್ವದ ಆಧಾರದ ಮೇಲೆ ಕೋಮುವಾದ, ಕ್ರೌರ್ಯ, ದ್ವೇಷವನ್ನು ಬಿತ್ತುವ ಬಿಜೆಪಿ ಸರ್ಕಾರವನ್ನು ಕೆಳಗಿಸುವ ತನಕ ಕಾಂಗ್ರೆಸ್ ಹೋರಾಡಲಿದೆ. ಖರ್ಗೆ ಅವರಿಗೆ ಅವಮಾನ ಮಾಡಿರುವುದು ದೇಶದ ಸಂವಿಧಾನಕ್ಕೆ ಅವಮಾನಿಸಿದಂತೆ ಎಂದು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್ ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿಯು ಸಂವಿಧಾನ, ದಲಿತ ವಿರೋಧಿ ನಿಲುವು ಹೊಂದಿದೆ. ಎಐಸಿಸಿ ಅಧ್ಯಕ್ಷರು ಭಾಷಣ ಮಾಡಿದ ಸ್ಥಳವನ್ನು ಗಂಗಾಜಲ ಬಳಸಿ ಶುದ್ಧೀಕರಿಸುವ ನೆಪದಲ್ಲಿ ದಲಿತ ಸಮೂಹಕ್ಕೆ ಅವಮಾನ ಮಾಡಿದ್ದಾರೆ. ಈ ಬಗ್ಗೆ ಭಾರತೀಯರು ಎಚ್ಚೆತ್ತುಕೊಳ್ಳಬೇಕು ಎಂದು ಕಾಂಗ್ರೆಸ್ ಪರಿಶಿಷ್ಟ ವಿಭಾಗದ ಅಧ್ಯಕ್ಷ ಎಲ್.ಚಂದ್ರಪ್ಪ ಹೇಳಿದರು.
ಸ್ಥಳ ಶುದ್ಧೀಕರಣ ನಾಗರಿಕ ಸಮಾಜ ತಲೆತಗ್ಗಿಸುವ ಕೆಲಸ. ದೇಶದಲ್ಲಿ ಸಂವಿಧಾನಬದ್ಧವಾಗಿ ಆಡಳಿತ ನಡೆಸುತ್ತಿಲ್ಲ. ಇದು ಮಲ್ಲಿಕಾರ್ಜುನ ಖರ್ಗೆಗೆ ಮಾಡಿದ ಅವಮಾನವಲ್ಲ, ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗದವರ ಆತ್ಮಗೌರವಕ್ಕೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ನಗರಸಭೆ ಮಾಜಿ ಅಧ್ಯಕ್ಷೆ ಎನ್.ಲಲಿತಮ್ಮ ದೂರಿದರು.
ಪ್ರಮುಖರಾದ ಪ್ರಭಾವತಿ, ಕಲಸೆ ಚಂದ್ರಪ್ಪ, ಸುರೇಶಬಾಬು, ಜ್ಯೋತಿ ಕೋವಿ, ಗಣಪತಿ ಮಂಡಗಳಲೆ, ಸೈಯದ್ ಜಾಕೀರ್, ವಿಲ್ಸನ್ ಗೋನ್ಸಾಲ್ವಿಸ್, ರೇಖಾ, ಮಂಜುಳಾ ಚಂದ್ರಪ್ಪ, ದಿನೇಶ್, ಮಹಾಬಲ ಕೌತಿ, ಆನಂದ್, ಗಿರೀಶ್ ಕೋವಿ, ಅನ್ವರ್ ಬಾಷಾ, ನಾಗರಾಜ ಗುಡ್ಡೆಮನೆ, ಲಿಂಗರಾಜ್ ಕೆ. ಹೊಳೆಯಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net