ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ಕೆಲವರ ಚಾಳಿಯಾಗಿದೆ. ಬೇಸೂರು ಗ್ರಾಮದ ಎಸ್ಸಿ ಕಾಲನಿಯಲ್ಲಿ ಅರಣ್ಯ ಇಲಾಖೆ ಟ್ರಂಚ್ ಹೊಡೆಯಲು ಹೋದಾಗ ಬಿಜೆಪಿಯ ಕೆಲವು ಮುಖಂಡರು ತಡೆದಿದ್ದಾರೆ. ಅರಣ್ಯ ಇಲಾಖೆ ತನ್ನ ಜಾಗವನ್ನು ಬಂದೋಬಸ್ತ್ ಮಾಡಿಕೊಳ್ಳಲು ಅಡ್ಡಿಪಡಿಸುವುದು ಸರಿಯಲ್ಲ. ಹೊಸದಾಗಿ ಒತ್ತುವರಿಗೆ ಅವಕಾಶ ಇಲ್ಲ. ಹಿಂದಿನಿಂದಲೂ ಉಳುಮೆ ಮಾಡಿಕೊಂಡ ಬಂದವರಿಗೆ ಅರಣ್ಯ ಇಲಾಖೆ ಯಾವುದೇ ತೊಂದರೆ ಕೊಡುವುದಿಲ್ಲ. ಯಡಮನೆ, ನಾಡಕಲಸಿ, ಬೇಸೂರು ಇನ್ನಿತರೆ ಕಡೆಗಳಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆಗೆ ಮುಂದಾಗಿದೆ. ಲಾಗಾಯ್ತಿನಿಂದ ಸಾಗುವಳಿ ಮಾಡಿಕೊಂಡು ಬಂದ ರೈತರಿಗೆ ತೊಂದರೆ ಕೊಟ್ಟರೆ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿದ್ದೇನೆ ಎಂದರು.