ಪಾಲಿಕೆಯ ಎಲ್ಲ ವಾರ್ಡ್‌ಗಳಲ್ಲಿ ತಲಾ ಒಂದು ಸಂಘ ಹಾಗೂ ಪಾಲಿಕೆಯ ವಾರ್ಡ್ ಸಂಖ್ಯೆ 1, 16, 17 ಮತ್ತು 23ರಲ್ಲಿ ಜನಸಂಖ್ಯೆಗೆ ಅನುಗುಣವಾಗಿ ತಲಾ ಎರಡು ಸಂಘಗಳ ಸ್ಥಾಪನೆ ಮಾಡಲಾಗುತ್ತಿದೆ. ಸಂಘದ ಮೂಲಕ ಕ್ರೀಡೆ ಮತ್ತು ಫಿಟ್‌ನೆಸ್(Sports and fitness), ಯುವಸಬಲೀಕರಣ, ಕೌಶಲಾಭಿವೃದ್ಧಿ, ಸಮುದಾಯದ ಅಭಿವೃದ್ಧಿ, ಅರಣ್ಯ ಮತ್ತು ಪರಿಸರ ಸಂರಕ್ಷಣೆ, ಆರೋಗ್ಯ ಮತ್ತು ಯೋಗಕ್ಷೇಮ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯ ಹಾಗೂ ಕೌಶಲಾಭಿವೃದ್ಧಿ ಸೇವಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಬೇಕಿದೆ ಎಂದಿದ್ದಾರೆ.